ಸೋಮವಾರಪೇಟೆ, ಸೆ. ೧೨: ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪಟ್ಟಣದ ಇನ್ನರ್ವೀಲ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸ ಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಪಾಸಿಂಗ್ ದಿ ಬಾಲ್, ಲೂಡೊ ಮತ್ತು ಅದೃಷ್ಟವಂತ ಸದಸ್ಯರನ್ನು ಲಕ್ಕಿಡಿಪ್ ಮೂಲಕ ಆಯ್ಕೆಮಾಡುವ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಇನ್ನರ್ವೀಲ್ ಕ್ಲಬ್ ವತಿಯಿಂದ ಬಹುಮಾನ ವಿತರಿಸಲಾಯಿತು. ಶಾಲೆಯ ಶಿಕ್ಷಕರನ್ನು ಈ ಸಂದರ್ಭ ಗೌರವಿಸಲಾಯಿತು.
ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ಪ್ರೇಮ ಹೃಷಿಕೇಶ್ ಮಾತನಾಡಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು. ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಶ್ರಮ ಅಪಾರ. ಈ ನಿಟ್ಟಿನಲ್ಲಿ ಶಿಕ್ಷಕರನ್ನು ಗೌರವಿಸುವ ಕಾರ್ಯವನ್ನು ಸಂಸ್ಥೆ ವತಿಯಿಂದ ಆಯೋಜಿಸಿದ್ದೇವೆ ಎಂದರು.
ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ಪಿ.ಕೆ. ಲಕ್ಷಿö್ಮ, ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ವೆಂಕಟೇಶ್, ನಿರ್ದೇಶಕ ಎ.ಎಸ್. ಮಹೇಶ್, ಇನ್ನರ್ವೀಲ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸೌಮ್ಯ ಸತೀಶ್ ಸೇರಿದಂತೆ ಕ್ಲಬ್ನ ಸದಸ್ಯರುಗಳು ಭಾಗವಹಿಸಿದ್ದರು.