ಪ್ರಯೋಜನ ಪಡೆಯಲು ಸಲಹೆ

ಮಡಿಕೇರಿ, ಸೆ. ೧೨: ನಮ್ಮ ರಾಜ್ಯದಲ್ಲಿ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿ ಅವರಿಂದ ಯಶಸ್ವಿಯಾಗಿ ಚಾಲನೆಗೊಂಡ ಗ್ರಾಮ ಒನ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ-ಆರೋಗ್ಯ ಕರ್ನಾಟಕ ಕಾರ್ಡ್ ಕಲ್ಪಿಸಲಾಗುತ್ತಿದೆ.

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನಾ -ಆರೋಗ್ಯ ಕರ್ನಾಟಕ (Pಒ ಎಂಙ-Aಡಿಞ) ಅಡಿಯಲ್ಲಿ ಎಬಿಹೆಚ್‌ಎ ಕಾರ್ಡ್ (ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್) ಜೋಡಣೆ ಮಾಡಲಾಗಿದ್ದು, ಇನ್ನು ಮುಂದೆ ಆಯುಷ್ಮಾನ್ ಭಾರತ್ ಮತ್ತು ಎಬಿಎಚ್‌ಎ ಜಂಟಿಯಾಗಿರುವ ಎರಡು ಸೇವೆಗಳುಳ್ಳ ಈ ಕಾರ್ಡ್ಗಳನ್ನು ನಿಮ್ಮ ಹತ್ತಿರದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ಪಡೆಯಬಹುದಾಗಿದೆ.

ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ದೇಶದ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರಿಗೆ ದೇಶದಲ್ಲಿ ಯಾವುದೇ ನೋಂದಾಯಿತ ಆಸ್ಪತ್ರೆಗಳಲ್ಲಿ ವಾರ್ಷಿಕ ಗರಿಷ್ಠ ರೂ.೫ ಲಕ್ಷದವರೆಗೆ ಉಚಿತ ಚಿಕಿತ್ಸೆಗೆ ಸೇವೆ ನೀಡುವ ಅರ್ಹತೆ ನೀಡುತ್ತದೆ ಹಾಗೂ ಎ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ನಿಮಗೂ ಹಾಗೂ ನಿಮ್ಮ ಕುಟುಂಬ ಸದಸ್ಯರಿಗೆ ದೇಶದಲ್ಲಿ ಯಾವುದೇ ನೋಂದಾಯಿತ ಆಸ್ಪತ್ರೆಗಳಲ್ಲಿ ವಾರ್ಷಿಕ ಗರಿಷ್ಠ ರೂ. ೧.೫ ಲಕ್ಷದ ವರೆಗೆ ಶೇ.೩೦ ರಿಯಾಯಿತಿ ದರದಲ್ಲಿ ಚಿಕಿತ್ಸೆ ಪಡೆಯಲು ಉಪಯುಕ್ತವಾಗಲಿದೆ. ಂಃPಒ ಎಂಙ-Aಡಿಞ ಕಾರ್ಡ್ಗಳು ಂಖಿಒ ಕಾರ್ಡ್ ಮಾದರಿಯಲ್ಲಿದ್ದು, ಆಸ್ಪತ್ರೆಯ ಭೇಟಿ ಸಮಯದಲ್ಲಿ ತೆಗೆದುಕೊಂಡು ಹೋಗಲು ಅನುಕೂಲಕರವಾಗಿರುತ್ತದೆ. ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳುವAತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೆಂಕಟೇಶ್ ಅವರು ತಿಳಿಸಿದ್ದಾರೆ.