ಕೂಡಿಗೆ, ಸೆ. ೧೨: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿ ಸೋಮವಾರಪೇಟೆ ಸಮೂಹ ಸಂಪನ್ಮೂಲ ಕೇಂದ್ರ ಕೂಡಿಗೆ ಇವರ ವತಿಯಿಂದ ಕೂಡಿಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಕೂಡುಮಂಗಳೂರು ಗ್ರಾ. ಪಂ. ವ್ಯಾಪ್ತಿಯ ಕೆಇಎಸ್ ಕಿಶೋರ್ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್ ಎನ್ ಮಂಜುನಾಥ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಕೂಡು ಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಸೋಮವಾರಪೇಟೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಪ್ರೌಢಶಾಲಾ ಸಂಘದ ನಿರ್ದೇಶಕ ದಯಾನಂದ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಉಮಾದೇವಿ, ಶಿಕ್ಷಣ ಸಂಯೋಜಕರಾದ ಶೇರುಕ್, ರಾಧಾಕೃಷ್ಣ, ಕೆಇಎಸ್ ಟ್ರಸ್ಟ್ನ ಕಾರ್ಯದರ್ಶಿ ಉಮಾಪ್ರಭಾಕರ್, ಸಿಆರ್‌ಪಿ ಶಾಂತಾಕುಮಾರ್, ಬಿಆರ್ ಪಿ. ಲೋಕೇಶ್ ಸೇರಿದಂತೆ ಕ್ಲಸ್ಟರ್ ಮಟ್ಟದ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.