' ಮುಳ್ಳೂರು, ಸೆ. ೧೨: ಸಮೀಪದ ಆಲೂರುಸಿದ್ದಾಪುರ ಸರಕಾರಿ ಪ್ರಾಥಮಿಕ ಶಾಲೆಯ ಗ್ರಾಮೀಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೈಹಿಕ ಶಿಕ್ಷಕರು, ತೀರ್ಪುಗಾರರು ಮತ್ತು ಶಿಕ್ಷಕರಿಗೆ ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆ ವತಿಯಿಂದ ಟೋಪಿಗಳನ್ನು ವಿತರಣೆ ಮಾಡ ಲಾಯಿತು. ಈ ಸಂದರ್ಭ ಮಲ್ಲೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಂ.ಬೇಬಿ, ಕಾರ್ಯದರ್ಶಿ ಮನೋಹರ್, ನಿಕಟಪೂರ್ವ ಅಧ್ಯಕ್ಷ ಹೆಚ್.ಇ.ತಮ್ಮಯ್ಯ, ನಿಕಟಪೂರ್ವ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವ ಪಲ್ಯಾದ್, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್, ಸುನಿಲ್ ಮುಂತಾದವರು ಇದ್ದರು.