ನಾಪೋಕ್ಲು, ಸೆ. ೧೨: ಇಲ್ಲಿಗೆ ಸಮೀಪದ ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆಯನ್ನು ಆಚರಿಸಲಾಯಿತು. ಮೂರ್ನಾಡಿನ ಮಾರುತಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ವಾಟೇರಿರ ಸಪ್ನ ಸುಬ್ಬಯ್ಯ ಹಾಗೂ ಮೂರ್ನಾಡಿನ ದಾನಿಗಳಾದ ಬಾಚೆಟ್ಟಿರ ಕಮಲು ಮುದ್ದಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅತಿಥಿಗಳಾದ ಸಪ್ನ ಸುಬ್ಬಯ್ಯನವರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ನಾವು ವೇದಿಕೆ ಕಲ್ಪಿಸಿಕೊಡಬೇಕು. ಅವರನ್ನು ಇನ್ನಷ್ಟು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ಸಂಸ್ಥೆಯ ಅಧ್ಯಕ್ಷರಾದ ಬಾಚೆಟ್ಟಿರ ಜಿ. ಮಾದಪ್ಪ ಮಾತನಾಡಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳನ್ನು ಲವಲವಿಕೆಯಿಂದ ಇರುವಂತೆ ಮಾಡುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಪುದಿಯೊಕ್ಕಡ ಸುಬ್ರಮಣಿ, ಕಾರ್ಯದರ್ಶಿಗಳಾದ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಹಾಗೂ ಸಂಸ್ಥೆಯ ನಿರ್ದೇಶಕರುಗಳು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಟ್ಟಡ ಪೂವಣ್ಣನವರು ಹಾಗೂ ವಿದ್ಯಾಸಂಸ್ಥೆಯ ವಿವಿಧ ವಿಭಾಗದ ಮುಖ್ಯಸ್ಥರು ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಭ್ಯಾಸದ ಜೊತೆಗೆ ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕುವ ವೇದಿಕೆ ಇದಾಗಿದ್ದು, ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.