ಮಕರಸಂಕ್ರಾAತಿಯAದು ಅಯೋಧ್ಯೆಯಲ್ಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ
ಲಖನೌ, ಸೆ. ೧೩: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಜನವರಿ ೧೪, ೨೦೨೪ರ ಮಕರಸಂಕ್ರಾAತಿಯAದು ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ. ೨೦೨೪ರಲ್ಲಿ ‘ಮಕರಸಂಕ್ರಾAತಿ' ದಿನದಂದು ಭಗವಾನ್ ರಾಮ ಮತ್ತು ಅವರ ಸಹೋದರರ ವಿಗ್ರಹಗಳನ್ನು 'ಗರ್ಭ ಗುಡಿ'ಯಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದು ದೇವಾಲಯದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ತಿಳಿಸಿದ್ದಾರೆ. ಮೂರು ಅಂತಸ್ತಿನ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ನೆಲ ಮಹಡಿಯನ್ನು ಡಿಸೆಂಬರ್ ೨೦೨೩ ರ ವೇಳೆಗೆ ಪೂರ್ಣಗೊಳಿಸಲಾಗುವುದು. ಇದಲ್ಲದೆ, ಮಂದಿರ ನಿರ್ಮಾಣದ ವೆಚ್ಚವನ್ನು ರೂ. ೧೮೦೦ ಕೋಟಿಗೆ ಪರಿಷ್ಕರಿಸಲಾಗಿದೆ. ಅಲ್ಲದೆ ವೆಚ್ಚವು ಇನ್ನೂ ಹೆಚ್ಚಾಗಬಹುದು ಎಂದು ಅವರು ತಿಳಿಸಿದ್ದಾರೆ. ಈ ಹಿಂದೆ ದೇವಾಲಯದ ವೆಚ್ಚ ಸುಮಾರು ರೂ. ೪೦೦ ಕೋಟಿ ಎಂದು ಅಂದಾಜಿಸಲಾಗಿತ್ತು. ದೇವಸ್ಥಾನದ ಟ್ರಸ್ಟ್ನಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮತ್ತು ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ರೈ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರು-ಪೊಲೀಸರ ನಡುವೆ ಸಂಘರ್ಷ
ಕೊಲ್ಕತ್ತ, ಸೆ. ೧೩: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಪ್ರತಿಭಟನಾ ಮೆರವಣಿಗೆ ಮೂಲಕ ಕೊಲ್ಕತ್ತಾದ ರಾಜ್ಯ ಕಾರ್ಯಾಲಯ ‘ನಬನ್ನಾ’ಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ಸಂಘರ್ಷದಿAದಾಗಿ ಪಶ್ಚಿಮ ಬಂಗಾಳದ ಕೆಲವೆಡೆ ಮಂಗಳವಾರ ರಣರಂಗದ ಪರಿಸ್ಥಿತಿ ನಿರ್ಮಾಣವಾಯಿತು. ಈ ಹಿಂಸಾಚಾರದಲ್ಲಿ ಬಿಜೆಪಿಯ ಮೀನಾ ದೇವಿ ಪುರೋಹಿತ್, ಸ್ವಪನ್ ದಾಸ್ ಗುಪ್ತಾ ಸೇರಿದಂತೆ ಬಿಜೆಪಿಯ ಅನೇಕ ಮುಖಂಡರು ಹಾಗೂ ಪೊಲೀಸ್ ಅಧಿಕಾರಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ. ಪ್ರತಿಭಟನಾ ಮೆರವಣಿಗೆ ವೇಳೆ ಬಂಗಾಳ ವಿಪಕ್ಷ ನಾಯಕ ಸುವೇಂದು ಅಧಿಕಾರಿ, ಹಿರಿಯ ಮುಖಂಡ ರಾಹುಲ್ ಸಿನ್ಹಾ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲ ಫಿರಂಗಿಗಳನ್ನು ಬಳಸಿದ್ದು, ನಗರದಲ್ಲಿನ ಅನೇಕ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.
ಲೈಂಗಿಕ ಕಿರುಕುಳ : ಈರ್ವರ ವಿರುದ್ಧ ಪೋಕ್ಸೊ ಪ್ರಕರಣ
ಕಲಬುರಗಿ, ಸೆ. ೧೩: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ಶಾಲೆಯೊಂದರಲ್ಲಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಚೇತನ ರೆಡ್ಡಿ ಹಾಗೂ ಕಂಪ್ಯೂಟರ್ ಆಪರೇಟರ್ ಸಂಗಮೇಶ ಅವರನ್ನು ಬಂಧಿಸಲಾಗಿದೆ. ಮುಖ್ಯೋಪಾಧ್ಯಾಯ, ಕಂಪ್ಯೂಟರ್ ಆಪರೇಟರ್ ವಿರುದ್ಧ ಕೊಂಚಾವರA ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಹಾಗೂ ಜಾತಿನಿಂದನೆ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಚೇತನರೆಡ್ಡಿ ಹಾಗೂ ಸಂಗಮೇಶ ಅವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಶಾಲೆಯ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೋಷಕರು ಮತ್ತು ಗ್ರಾಮಸ್ಥರು ಸೋಮವಾರ ಶಾಲೆಗೆ ತೆರಳಿ ಮುಖ್ಯ ಶಿಕ್ಷಕ ಹಾಗೂ ಕಂಪ್ಯೂಟರ್ ಆಪರೇಟರ್ ಇಬ್ಬರಿಗೂ ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಲಿಂಗ್ ಅವರು ಭೇಟಿ ನೀಡಿ ಪಾಲಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ಕೊಂಚಾವರA ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹೆಡ್ಮಾಸ್ಟರ್ ಚೇತನ್ಕುಮಾರ್ ರೆಡ್ಡಿ ಮತ್ತು ಕಂಪ್ಯೂಟರ್ ಆಪರೇಟರ್ ಸಂಗಮೇಶ್ ಅವರನ್ನು ಬಂಧಿಸಲಾಗಿದೆ.
ರಾಜಕಾಲುವೆ ಒತ್ತುವರಿ ತೆರವು
ಬೆಂಗಳೂರು, ಸೆ. ೧೩: ನಗರದಲ್ಲಿ ಮಳೆ ಸುರಿದರೆ ಆಗುವ ಅನಾಹುತಗಳನ್ನು ತಪ್ಪಿಸಲು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಅಕ್ರಮ ಕಟ್ಟಡಗಳು, ನಿವಾಸದ ಮನೆಗಳನ್ನು ತೆರವುಗೊಳಿಸುವ ತನ್ನ ಎರಡನೇ ದಿನದ ಕಾರ್ಯಾಚರಣೆಯನ್ನು ಬಿಬಿಎಂಪಿ ಮುಂದುವರಿಸಿದೆ. ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡಗಳ ಬಗ್ಗೆ ಬಿಬಿಎಂಪಿ ಪಟ್ಟಿ ಮಾಡಿದ್ದು, ೬೦೦ ಒತ್ತುವರಿ ಕಟ್ಟಡಗಳ ತೆರವಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ರಾಜಕಾಲುವೆ ಒತ್ತುವರಿ ಕಾರ್ಯ ಮುಂದುವರೆದಿದ್ದು, ಮಹದೇವಪುರ ಭಾಗದಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತಿದೆ. ಪ್ರತಿಷ್ಠಿತ ವಿಲ್ಲಾಗಳು, ಶಿಕ್ಷಣ ಸಂಸ್ಥೆ, ಮನೆಗಳು ಒತ್ತುವರಿ ಕಾರ್ಯಾಚರಣೆಗೆ ನೆಲಸಮವಾಗುತ್ತಿವೆ.
ವಿಧಾನಸಭೆ ಕಲಾಪ ಆರಂಭ
ಬೆAಗಳೂರು, ಸೆ. ೧೩: ಕರ್ನಾಟಕ ವಿಧಾನಸಭೆ ಕಲಾಪ ಮೊದಲ ದಿನ ಸ್ವಾರಸ್ಯದಿಂದ ಕೂಡಿತ್ತು. ಮೊದಲು ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪಿದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ಹಾಗೂ ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ.ವಿ. ಶ್ರೀರಾಮ ರೆಡ್ಡಿ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಂಡಿದ್ದು, ಉಮೇಶ್ ಕತ್ತಿಗೆ ಸಂತಾಪ ಸೂಚಿಸುವಾಗ ಅವರು ನಡೆದು ಬಂದ ಹಾದಿಯನ್ನು ವಿವರಿಸುವಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾದರು. ಇದರೊಂದಿಗೆ ವಿವಿಧ ವಿಚಾರಗಳು ಸದನದಲ್ಲಿ ಪ್ರಸ್ತಾಪಗೊಂಡವು. ಜೊತೆಗೆ ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರವೂ ನಡೆಯಿತು.