ಸೋಮವಾರಪೇಟೆ, ಸೆ.೧೪: ಸಮೀಪದ ಬೇಳೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳು ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿದ್ದು, ಇವರುಗಳನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿರುವ ಗ್ರಾ.ಪಂ. ಸದಸ್ಯರುಗಳು, ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇಳೂರು ಗ್ರಾ.ಪಂ. ಪಿಡಿಓ ಮತ್ತು ಕಾರ್ಯದರ್ಶಿಯನ್ನು ವರ್ಗಾವಣೆ ಮಾಡುವವರೆಗೂ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಲಾಗುವುದು ಎಂದು ಪಂಚಾಯಿತಿ ಅಧ್ಯಕ್ಷ ಬಿ.ಎಂ.ಪ್ರಶಾAತ್ ಎಚ್ಚರಿಸಿದ್ದಾರೆ.
ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ ನಂತರ ಪತ್ರಿಕಾ ಗೋಷ್ಠಿಯಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿರುವ ಸದಸ್ಯರುಗಳು, ಆಡಳಿತ ಮಂಡಳಿಯನ್ನು ನಿರ್ಲಕ್ಷಿಸುತ್ತಿರುವ ಅಧಿಕಾರಿಗಳನ್ನು ವರ್ಗಾಯಿಸುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗು ಸಂಬAಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ದೂರು ನೀಡಲಾಗಿದೆ ಎಂದು ಹೇಳಿದರು.
ಪಿಡಿಒ ಅಂಜನಾದೇವಿ ಹಾಗು ಕಾರ್ಯದರ್ಶಿ ಶರಣಪ್ಪ ಅವರುಗಳು ಅನುಭವದ ಕೊರತೆಯಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿದೆ. ಸದಸ್ಯರ ಸಲಹೆಗಳನ್ನು ತೆಗೆದುಕೊಳ್ಳದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಲಾಭದಾಯಕ ಕಾಮಗಾರಿಗಳಿಗೆ ಹೆಚ್ಚಿನ ಅದ್ಯತೆ ನೀಡುತ್ತಾ, ಮೂಲಭೂತ ಸೌಕರ್ಯಗಳ ಬಗ್ಗೆ ನಿರ್ಲಕ್ಷö್ಯ ವಹಿಸಿದ್ದಾರೆ ಎಂದು ದೂರಿದರು.
ಕೂಲಿ ಕಾರ್ಮಿಕರು ಹೆಚ್ಚಿರುವ ಪಂಚಾಯಿತಿಯಲ್ಲಿ ಕಸವಿಲೇವಾರಿ ಘಟಕ ನಿರ್ಮಾಣಕ್ಕೆ ಜಾಗವನ್ನು ಗುರುತಿಸಲಾಗಿದೆ. ಆದರೆ ಘಟಕ ನಿರ್ಮಾಣವಾಗಿಲ್ಲ. ಈ ಬಗ್ಗೆ ವಿಳಂಬಧೋರಣೆ ಮಾಡುತ್ತಿದ್ದಾರೆ. ಸಾರ್ವಜನಿಕರು ಸಮಸ್ಯೆಗೆ ಸಿಲುಕಿದ್ದಾರೆ. ಪ್ರತಿವಾರ ಒಂದೊAದು ವಾರ್ಡ್ಗೆ ಪಿಡಿಒ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಬೇಕು ಎಂದು ಹೇಳಲಾಗಿತ್ತು. ಆದರೆ ೧೮ ತಿಂಗಳಾದರೂ ಒಂದು ವಾರ್ಡ್ಗೂ ಭೇಟಿ ನೀಡಿಲ್ಲ. ಇದರಿಂದ ಜನರು ಆಕ್ರೋಶಗೊಂಡಿದ್ದಾರೆ ಎಂದರು.
ಜಲಜೀವನ್ ಯೋಜನೆಯಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಕಾಮಗಾರಿ ಸಮರ್ಪಕವಾಗಿಲ್ಲ. ಮೂರು ವಾರ್ಡ್ಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ. ಆದರೆ ಬಿಲ್ ಪಾವತಿಸಲಾಗಿದೆ. ಬಾಕಿಯಿರುವ ಬಡವರ ಹಕ್ಕುಪತ್ರ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದರು.
ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುವುದಿಲ್ಲ. ಕೇಳಿದರೆ ಮೀಟಿಂಗ್ ಎಂದು ಸಬೂಬು ಹೇಳುತ್ತಾರೆ. ಪಂಚಾಯಿತಿಯಲ್ಲಿ ಅಧಿಕಾರಿ ಸಿಗುವುದಿಲ್ಲ ಎಂದು ಸಾರ್ವಜನಿಕರು ಜನಪ್ರತಿನಿಧಿಗಳನ್ನು ಪ್ರಶ್ನೆ ಮಾಡುತ್ತಾರೆ. ವಸತಿ ಯೋಜನೆಯಲ್ಲಿ ಬಡವರಿಂದ ಮಾಮೂಲಿ ವಸೂಲಿ ಮಾಡುತ್ತಿದ್ದಾರೆ ಎಂದು ಫಲಾನುಭವಿಗಳು ದೂರಿಕೊಂಡಿದ್ದಾರೆ ಎಂದು ಪ್ರಶಾಂತ್ ಆರೋಪಿಸಿದರು.
ಅನುಭವದ ಕೊರತೆ ಹಾಗು ಸೇವಾ ಮನೋಭಾವ ಇಲ್ಲದವರನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿ ಗಳನ್ನಾಗಿ ನೇಮಕ ಮಾಡಬಾರದು ಎಂದು ಅಧ್ಯಕ್ಷ ಪ್ರಶಾಂತ್ ಮನವಿ ಮಾಡಿದರು. ಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಜಿ.ಟಿ.ಸುಜಾತ, ಸದಸ್ಯರಾದ ಪಿ.ಎಂ.ಪಾರ್ವತಿ, ತಿಮ್ಮಪ್ಪ ನಾಯಕ, ಕೆ.ಪಿ.ಸುದರ್ಶನ್ ಉಪಸ್ಥಿತರಿದ್ದರು.