ಮಡಿಕೇರಿ, ಸೆ. ೧೪: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ’ಭಾರತ್ ಜೋಡೋ’ ಪಾದಯಾತ್ರೆ ಅ.೧ ರಂದು ನಂಜನಗೂಡು ವ್ಯಾಪ್ತಿಯ ಕಳಲೆ ಗೇಟ್ ಬಳಿ ಆಗಮಿಸಲಿದ್ದು, ಕೊಡಗಿನಿಂದ ಹಲವಾರು ಕಾರ್ಯಕರ್ತರು ಪಾಲ್ಗೊಂಡು ಸ್ವಾಗತಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಎಂ.ಲಕ್ಷö್ಮಣ್ ತಿಳಿಸಿದರು.
ತಾ. ೭ ರಿಂದ ಭಾರತ್ ಜೋಡೊ ಆರಂಭವಾಗಿದೆ. ಕರ್ನಾಟಕದಲ್ಲಿ ತಾ. ೩೦ ರಂದು ಗುಂಡ್ಲುಪೇಟೆ ಮೂಲಕ ಆರಂಭಗೊಳ್ಳಲಿದೆ. ರಾಜ್ಯದ ೮ ಜಿಲ್ಲೆಗಳಲ್ಲಿ ೨೧ ದಿನಗಳ ಕಾಲ, ೫೧೦ ಕಿಮೀ ಪಾದಯಾತ್ರೆ ನಡೆಸಲಿದ್ದು, ಸುಮಾರು ೧ ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ. ಕೊಡಗಿನ ಸಂಸ್ಕೃತಿಯನ್ನು ಬಿಂಬಿಸುವ ಕಲಾಕೃತಿಗಳು ಇರಲಿವೆ. ಇದು ಕೇವಲ ಕಾಂಗ್ರೆಸ್ ಕಾರ್ಯಕ್ರಮ ಅಲ್ಲ. ಪಕ್ಷಾತೀತವಾಗಿ ನಡೆಯಲಿದೆ. ವಿವಿಧ ಸಂಘಟನೆಗಳೊAದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಂಗ್ರೆಸ್‌ಗೆ ಗೆಲುವು ಖಚಿತ: ಮುಂಬರುವ ಎಂಎಲ್‌ಎ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಬಿಜೆಪಿ ಎರಡು ಕ್ಷೇತ್ರದಲ್ಲೂ ಸೋಲು ಕಾಣಲಿದೆ ಎಂದಿರುವ ಲಕ್ಷö್ಮಣ್, ಡಿ.ಕೆ. ಶಿವಕುಮಾರ್ ಎಂಎಲ್‌ಎ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದು ಹೇಳಿದರು. ಮಾಜಿ ಸಚಿವ ಬಿ.ಎ. ಜೀವಿಜಯ ಮಾತನಾಡಿ ಬಿಜೆಪಿ ಸಂವಿಧಾನದ ನಂಬಿಕೆ ಮತ್ತು ವಿಶ್ವಾಸವನ್ನು ಇಟ್ಟುಕೊಂಡಿಲ್ಲ ಎಂದರು.
ಬಿಜೆಪಿ ಸಂವಿಧಾನವನ್ನು ಕಿತ್ತು ಹಾಕುವ ಪ್ರಯತ್ನ ಮಾಡುತ್ತಿದೆ. ಗೌರವ ನೀಡುತ್ತಿಲ್ಲ. ದೇಶದ ಅಸ್ಥಿತ್ವ ಉಳಿಸುವ ಕೆಲಸವಾಗಬೇಕಿದೆ. ಸಿಬಿಐ, ಎಲೆಕ್ಷನ್ ಕಮಿಷನ್ ಹಸ್ತಕ್ಷೇಪ ವಿರೋಧಿಸಿ ರಾಹುಲ್‌ಗಾಂಧಿ ಪಾದಯಾತ್ರೆ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ವಕ್ತಾರ ಟಿ.ಇ. ಸುರೇಶ್, ಡಿಸಿಸಿ ಸದಸ್ಯ ಗಂಗಾಧರ್ ಉಪಸ್ಥಿತರಿದ್ದರು.