ಗೋಣಿಕೊಪ್ಪಲು, ಸೆ. ೧೪: ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡಬೇಕೆಂದು ಆಗ್ರಹಿಸಿ ಸೆ.೧೬ರಂದು ಮೈಸೂರು ಸೆಸ್ಕ್ ಪ್ರಧಾನ ಕಚೇರಿಯ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿದ್ಯುತ್ ಮೀಟರ್ ಸುಡುವ ಚಳವಳಿಯಲ್ಲಿ ಕೊಡಗು ಜಿಲ್ಲಾ ಘಟಕದ ವತಿಯಿಂದ ೫೦೦ಕ್ಕೂ ಅಧಿಕ ಮಂದಿ ಕಾರ್ಯಕರ್ತರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದು ರೈತ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ತಿಳಿಸಿದ್ದಾರೆ.

ಗೋಣಿಕೊಪ್ಪಲುವಿನ ರೈತ ಸಂಘದ ಕೇಂದ್ರ ಕಚೇರಿಯಲ್ಲಿ ಜಿಲ್ಲಾ ಸಮಿತಿ ಪದಾಧಿಕಾರಿಗಳು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾಹಿತಿ ನೀಡಿದ ಮನು ಸೋಮಯ್ಯ ಕಾಫಿ ಬೆಳೆಗಾರರ ೧೦ ಹೆಚ್.ಪಿ.ವರೆಗಿನ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಹಾಗೂ ಬಾಕಿ ಇರುವ ವಿದ್ಯುತ್ ಬಿಲ್ಲ್ ಮನ್ನಾ ಮಾಡಬೇಕೆಂದು ಬೇಡಿಕೆ ಮುಂದಿಟ್ಟು ಈ ಹಿಂದೆ ಪ್ರತಿಭಟನೆ ನಡೆಸಲಾಗಿತ್ತು. ಆದರೆ ಸರ್ಕಾರ ಕಾಫಿ ಬೆಳೆಗಾರರಿಗೆ ಮಲತಾಯಿ ಧೋರಣೆ ಅನುಸರಿಸುತ್ತಿ ರುವ ಹಿನ್ನೆಲೆಯಲ್ಲಿ ಉಚಿತ ವಿದ್ಯುತ್ ಕಲ್ಪಿಸುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ೧೬ರಂದು ಬೆಳಿಗ್ಗೆ ೧೧ ಗಂಟೆಗೆ ಮೈಸೂರಿನ ಸೆಸ್ಕ್ ಕಚೇರಿಯ ಮುಂಭಾಗದಲ್ಲಿ ಬೃಹತ್ ಚಳವಳಿ ಪ್ರಾರಂಭವಾಗಲಿದೆ. ಜಿಲ್ಲೆಯಲ್ಲಿರುವ ಕಾಫಿ ಬೆಳೆಗಾರರ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸಲು ಅವಕಾಶ ನೀಡುವುದಿಲ್ಲ ಹಾಗೂ ಪಂಪ್ ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಕ್ಕೆ ಅವಕಾಶ ನೀಡುವುದಿಲ್ಲ. ಸರ್ಕಾರದ ನೀತಿಯ ಬಗ್ಗೆ ರೈತರು ಪ್ರತಿಭಟನೆ ನಡೆಸಲಿದ್ದಾರೆ ಜಿಲ್ಲೆಯ ಪ್ರತಿ ತಾಲೂಕಿನಿಂದ ರೈತ ಸಂಘದಿAದ ಪದಾಧಿಕಾರಿಗಳು, ಸದಸ್ಯರು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆಂದರು.

ರೈತರಿಗೆ ಕನಿಷ್ಟ ೧೨ ಗಂಟೆ ಹಗಲು ೩ ಪೇಸ್ ವಿದ್ಯುತ್ ಕೊಡಬೇಕು. ಕಾಫಿ ಬೆಳೆಗಾರರ ಕುಟುಂಬದ ಎಲ್ಲಾ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಬೇಕು. ಕೃಷಿ ಪಂಪ್ ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕೈಬಿಡಬೇಕು. ರಾಜ್ಯದ ಎಲ್ಲ ರೈತರ ವಿದ್ಯುತ್ ಬಾಕಿ ಮನ್ನಾ ಮಾಡಬೇಕು. ಸೇರಿದಂತೆ ಇನ್ನೂ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಯಲಿದೆ ಎಂದು ಮನು ಸೋಮಯ್ಯ ತಿಳಿಸಿದರು.

ಸಭೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಶ್ ಸುಬ್ಬಯ್ಯ, ಅಮ್ಮತ್ತಿ ಹೋಬಳಿ ಅಧ್ಯಕ್ಷ ಮಂಡೇಪAಡ ಪ್ರವೀಣ್,ಕಿರುಗೂರು ಭಾಗದ ತೀತರಮಾಡ ರಾಜ, ಮಾಯಮುಡಿಯ ಪುಚ್ಚಿಮಾಡ ರಾಯ್ ಮಾದಪ್ಪ, ಶ್ರೀಮಂಗಲ ಹೋಬಳಿಯ ಅಧ್ಯಕ್ಷ ಚೆಟ್ಟಂಗಡ ಕಂಬ ಕಾರ್ಯಪ್ಪ ಹಾಗೂ ತಿತಿಮತಿ ಭಾಗದ ರೈತ ಮುಖಂಡರು ಭಾಗವಹಿಸಿದ್ದರು.