ಕುಶಾಲನಗರ, ಸೆ. ೧೪: ಕುಶಾಲನಗರ ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಎರಡು ಜಾನುವಾರುಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಧಾರುಣ ಘಟನೆ ಸಂಭವಿಸಿದೆ.

ಹೆದ್ದಾರಿಯಲ್ಲಿ ರಕ್ತಸ್ರಾವದಿಂದ ಸತ್ತುಬಿದ್ದಿದ್ದ ಜಾನುವಾರುಗಳನ್ನು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವತಿಯಿಂದ ಹೂಳಲು ಕ್ರಮ ಕೈಗೊಳ್ಳಲಾಗಿದೆ. ಸತ್ತು ಬಿದ್ದಿದ್ದ ದನಗಳ ಕಿವಿಯಲ್ಲಿ ಓಲೆಗಳು ಕಂಡುಬAದಿದ್ದು, ಇವುಗಳ ಮಾಲೀಕರ ಪತ್ತೆಗೆ ಪಶುವೈದ್ಯಕೀಯ ಇಲಾಖೆ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಮ್ ತಿಳಿಸಿದ್ದಾರೆ.

ಗುಡ್ಡೆಹೊಸೂರು, ಹೇರೂರು, ಹೊಸಕೋಟೆ ವ್ಯಾಪ್ತಿಯ ಬೀಡಾಡಿ ದನಗಳು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಯಲ್ಲಿ ಓಡಾಡುತ್ತಿದ್ದು, ಇದರಿಂದ ವಾಹನ ಸಂಚಾರಕ್ಕೆ ಅನಾನುಕೂಲ ಮತ್ತು ಅವಘÀಡಗಳು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ಜಾನುವಾರುಗಳ ಮಾಲೀಕರನ್ನು ಪತ್ತೆ ಹಚ್ಚಿ ಪೊಲೀಸ್ ದೂರು ನೀಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.