ಸೋಮವಾರಪೇಟೆ, ಸೆ. ೧೪: ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಲ್‌ಐಸಿ ವತಿಯಿಂದ ಸರ್ಕಾರಿ ಶಾಲೆ ಏಳಿಗೆಗೆ ನನ್ನ ಕೊಡುಗೆ ಎಂಬ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಲ್‌ಐಸಿ ಆಫ್ ಇಂಡಿಯಾ ಸೋಮವಾರಪೇಟೆ ಶಾಖೆಯ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಾಲಾ ಸಮವಸ್ತçವನ್ನು ಕೊಡುಗೆಯಾಗಿ ನೀಡಲಾಯಿತು. ಇದೇ ಶಾಲೆಯ ಹಳೆಯ ವಿದ್ಯಾರ್ಥಿನಿ ಸಂಧ್ಯಾರವರು ಎಲ್ಲಾ ಮಕ್ಕಳಿಗೆ ಐಡಿ ಕಾರ್ಡ್ಗಳನ್ನು, ಶಾಲೆಯ ಶಿಕ್ಷಕಿ ಜ್ಯೋತಿರವರು ಎಲ್ಲಾ ವಿದ್ಯಾರ್ಥಿಗಳಿಗೆ ಶರ್ಟ್ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ವಹಿಸಿದ್ದರು. ಎಲ್‌ಐಸಿಯ ಸೋಮವಾರಪೇಟೆ ಶಾಖೆಯ ಪ್ರಧಾನ ವ್ಯವಸ್ಥಾಪಕ ಸತೀಶ್ ಕುಮಾರ್, ಕುಶಾಲನಗರ ಶಾಖೆಯ ವ್ಯವಸ್ಥಾಪಕರಾದ ಋಷಿಕುಮಾರ್ ಹಾಗೂ ಅಭಿವೃದ್ಧಿ ಅಧಿಕಾರಿಗಳಾದ ಮೋಹನ್ ರಾಮ್, ಹಿರಿಯ ಅಧಿಕಾರಿ ಪಾರ್ವತಿ, ಗಣಗೂರು ಗ್ರಾಮ ಪಂಚಾಯಿತಿಯ ಸದಸ್ಯರುಗಳು, ಪೋಷಕರು ಉಪಸ್ಥಿತರಿದ್ದರು.