ಕೂಡಿಗೆ, ಸೆ. ೧೪: ರಾಜ್ಯ ಸರ್ಕಾರದ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ಕಾರ್ಯಕ್ರಮವು ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸದಸ್ಯರಾದ ಅನಂತ್ ನೆರವೇರಿಸಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಾರ್ವಜನಿಕ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದ್ದು, ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು, ಇದರ ಮೂಲಕ ಅರೋಗ್ಯವನ್ನು ಸುಧಾರಿಸಿಕೊಳ್ಳುವಂತೆ ಮನವಿ ಮಾಡಿಕೊಂಡರು.
ಸದಸ್ಯ ಅರುಣ್ ರಾವ್ ಮಾತನಾಡಿ, ಕೂಡಿಗೆ ವ್ಯಾಪ್ತಿಯ ಸಾರ್ವಜನಿಕರು ಮತ್ತು ರೈತರು ಗ್ರಾಮ ಓನ್ ಕಚೇರಿಯ ಮೂಲಕ ಯೋಜನೆಯ ನೋಂದಣಿ ಮಾಡಿಕೊಂಡು ಬಿಪಿಎಲ್ ಕಾರ್ಡ್ದಾರಿಗೆ ವಾರ್ಷಿಕ ರೂ. ೫ ಲಕ್ಷದವರಿಗೆ ಚಿಕಿತ್ಸಾ ಸೌಲಭ್ಯಗಳು ಇರುವುದರಿಂದ ಇದರ ಪ್ರಯೋಜನವನ್ನು ನೋಂದಣಿ ಮಾಡಿಕೊಂಡು ಪಡೆದುಕೊಳ್ಳುವಂತೆ ತಿಳಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ನೋಂದಣಿ ಮಾಡಿಕೊಂಡರು.