ಬಿಸಿಸಿಐ ಹಳೆ ನಿಯಮ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಅಸ್ತು
ನವದೆಹಲಿ, ಸೆ. ೧೪: ಬಿಸಿಸಿಐ ನಿಯಮಾವಳಿ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿರುವ ಸುಪ್ರೀಂಕೋರ್ಟ್, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಅವರು ತಮ್ಮ ಸ್ಥಾನದಲ್ಲಿ ಮುಂದುವರೆಯಲು ಬುಧವಾರ ಸುಗಮ ದಾರಿ ಮಾಡಿಕೊಟ್ಟಿದೆ. ಬಿಸಿಸಿಐ ಮತ್ತು ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಒಂದು ಅವಧಿ (೩ ವರ್ಷ) ಪೂರ್ಣಗೊಳಿಸಿರುವ ಪದಾಧಿಕಾರಿಗಳಿಗೆ ಕೂಲಿಂಗ್ ಆಫ್ ಅವಧಿ ರದ್ಧತಿ ಕುರಿತ ಬಿಸಿಸಿಐ ಮನವಿಯನ್ನು ನ್ಯಾಯ ಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರ ನ್ಯಾಯಪೀಠ ಸ್ವೀಕರಿಸಿದೆ. ಬಿಸಿಸಿಐ ಮತ್ತು ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಆರು ವರ್ಷ ಪೂರ್ಣಗೊಳಿಸಿರುವ ಪದಾಧಿಕಾರಿಗಳಿಗೆ ಮಾತ್ರ ಕೂಲಿಂಗ್ ಆಫ್ ಅವಧಿ ನಿಯಮ ಅನ್ವಯವಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮೂರು ವರ್ಷಗಳ ಅಧಿಕಾರ ಅವಧಿ ಮುಗಿದ ನಂತರ ಕೂಲಿಂಗ್ ಆಫ್ ಅವಧಿ ಅನ್ವಯಿಸಲಿದೆ ಎಂದು ಉನ್ನತ ನ್ಯಾಯಾಲಯ ತಿಳಿಸಿದೆ. ಬಿಸಿಸಿಐ ಮತ್ತು ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ಸತತ ೨ ಅವಧಿಗಳನ್ನು ಪೂರ್ಣಗೊಳಿಸಿದ ನಂತರ ಕೂಲಿಂಗ್ ಆಫ್ ಜಾರಿಗೆ ಬರುತ್ತದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.
ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಚಿತ್ರದುರ್ಗ, ಸೆ. ೧೪: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆಯನ್ನು ತಾ. ೧೬ಕ್ಕೆ ಮುಂದೂಡಲಾಗಿದೆ. ಜಾಮೀನು ಕೋರಿ ಶ್ರೀಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ. ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಮತ್ತೆ ೧೪ ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ ೨ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಇದೇ ಕೇಸ್‌ನಲ್ಲಿ ಎ೨ ಲೇಡಿ ವಾರ್ಡನ್ ನ್ಯಾಯಾಂಗ ಬಂಧನ ಅವಧಿ ಕೂಡ ವಿಸ್ತರಣೆ ಮಾಡಲಾಗಿದ್ದು ತಾ. ೨೭ ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಕನ್ನಡ ಕಡ್ಡಾಯಕ್ಕಾಗಿ ಹೊಸ ಕಾನೂನು ರಚನೆ: ಸಿಎಂ
ಬೆAಗಳೂರು, ಸೆ. ೧೪: ಕನ್ನಡ ಕಡ್ಡಾಯಕ್ಕಾಗಿ ಒಂದು ಹೊಸ ಕಾನೂನನ್ನೇ ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು. ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ಅವರು, ನಾನು ಕನ್ನಡ ಪರ ಇದ್ದೇನೆ. ಕನ್ನಡ ಉಳಿವು ಬೆಳವಣಿಗೆಗೆ ಸರ್ಕಾರ ಬದ್ದ ವಾಗಿದ್ದೇನೆ. ಇದರಲ್ಲಿ ಯಾವ ಕಾರಣಕ್ಕೂ ರಾಜಿಯೇ ಇಲ್ಲ. ನೆಲ ಜಲ ಭಾಷೆ ವಿಷಯದಲ್ಲಿ ರಾಜಕೀಯ ಮೀರಿ ನಿರ್ಧಾರ ಮಾಡುತ್ತೇವೆ, ಕರ್ನಾ ಟಕದಲ್ಲಿ ಕನ್ನಡ ಅಗ್ರಮಾನ್ಯ ಭಾಷೆ ಆಗಿದೆ ಎಂದು ಹೇಳಿದರು. ಕನ್ನಡವನ್ನು ಹೆಚ್ಚು ಬಳಸಲು ಒಂದು ಪ್ರತ್ಯೇಕ ಕಾನೂನು ತರುತ್ತಿದ್ದೇವೆ. ಕನ್ನಡವನ್ನು ನಾವು ಖಂಡಿತವಾಗಿ ರಕ್ಷಣೆ ಮಾಡುತ್ತೇವೆ ಎಂದು ಪ್ರತಿಪಾದಿಸಿದರು.
ಟೇಕ್‌ಆಫ್ ಆಗುವ ಮೊದಲೇ ಹೊತ್ತಿ ಉರಿದ ಏರ್ ಇಂಡಿಯಾ ವಿಮಾನ
ಮಸ್ಕಟ್, ಸೆ. ೧೪: ಮಸ್ಕಟ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಟೇಕ್‌ಆಫ್ ಆಗುವ ಕೆಲವೇ ನಿಮಿಷಗಳ ಮುನ್ನ ಇಂಜಿನ್‌ವೊAದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ೧೪೧ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಏರ್‌ಲೈನ್ ಮೂಲಗಳು ತಿಳಿಸಿವೆ. ವಿಮಾನ ಟೇಕ್‌ಆಫ್ ಆಗುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದರಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ವಿಮಾನ ಕೇರಳದ ಕೊಚ್ಚಿಗೆ ಹೊರಟಿತ್ತು. ಕೊಚ್ಚಿಗೆ ತೆರಳುತ್ತಿದ್ದ ಬೋಯಿಂಗ್ ೭೩೭-೮೦೦ ವಿಮಾನ ಈ ಘಟನೆ ಸಂಭವಿಸಿದ್ದು, ಹೊಗೆ ಕಾಣಿಸಿಕೊಂಡ ನಂತರ ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಗಿದೆ. ಈ ವಿಮಾನದಲ್ಲಿ ೧೪೧ ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಇದ್ದರು ಎಂದು ಮೂಲಗಳು ತಿಳಿಸಿವೆ. ವಿಮಾನಯಾನ ನಿಯಂತ್ರಕ ಡಿಜಿಸಿಎ ಘಟನೆಯ ಬಗ್ಗೆ ತನಿಖೆ ನಡೆಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮ
ಬೆಂಗಳೂರು, ಸೆ. ೧೪: ರಾಜ್ಯ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಬುಧವಾರ ಹೇಳಿದ್ದಾರೆ. ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ ಕಾರ್ಯಕಲಾಪದಲ್ಲಿ ಸದಸ್ಯ ಎನ್ ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವೆ, ಬೆಂಗಳೂರು ನಗರ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಾಲಯವು ಪ್ರವರ್ಗ “ಬಿ” ವರ್ಗದ ಧಾರ್ಮಿಕ ಸಂಸ್ಥೆಯಾಗಿ ರುತ್ತದೆ. ಪ್ರಸ್ತಾವಿತ ದೇವಾಲಯವು ಬೆಂಗಳೂರು ನಗರ ನೀಲಸಂದ್ರ ಗ್ರಾಮದ ಸರ್ವೆ ನಂ. ೭೯ ರಲ್ಲಿ ೧೫ ಎಕರೆ ೧೨ ಗುಂಟೆ ವಿಸ್ತೀರ್ಣ, ಹೊಂಗಸAದ್ರ ಗ್ರಾಮದ ಸರ್ವೆ ನಂ. ೩೩ ರಲ್ಲಿ ೧೬ ಎಕರೆ ೨೫ ಗುಂಟೆ ಜಮೀನು ಕಂದಾಯ ದಾಖಲಾತಿಯಂತೆ ದೇವಸ್ಥಾನದ ಹೆಸರಿನಲ್ಲಿದೆ. ಈ ಜಮೀನಿನಲ್ಲಿ ಅತಿಕ್ರಮವಾಗಿ ೨೨೯ ಕುಟುಂಬಗಳು ಮನೆಗಳನ್ನು ನಿರ್ಮಿಸಿಕೊಂಡಿವೆ. ಇದಕ್ಕೆ ಸಂಬAಧಪಟ್ಟAತೆ ೧೩ ಜನರ ವಿರುದ್ಧ ಕರ್ನಾಟಕ ಭೂಕಬಳಿಕೆ ನಿಷೇದ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅತಿಕ್ರಮಣಕಾರರ ಪರ ಸಲ್ಲಿಸಲಾಗಿದ್ದ ಬೆಂಗಳೂರಿನ ೮ನೇ ಹೆಚ್ಚುವರಿ ಸಿಟಿ ಸಿವಿಲ್ ಜಡ್ಜ್ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವು ವಜಾ ಗೊಂಡಿದ್ದು, ಅರ್ಜಿದಾರರು ಸರ್ವೋಚ್ಚ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಇಲಾಖೆಯ ವತಿಯಿಂದ ಸೂಕ್ತ ವಾದವನ್ನು ಮಂಡಿಸಲಾಗುತ್ತಿದೆ ಎಂದರು.
ವಿದ್ಯಾರ್ಥಿ ನಿಲಯಗಳಲ್ಲಿ ಶೇ.೨೫ರಷ್ಟು ಪ್ರವೇಶಾವಕಾಶ ಹೆಚ್ಚಿಸಿದ ಸರ್ಕಾರ
ಬೆಂಗಳೂರು, ಸೆ. ೧೪: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸುವ ಉದ್ದೇಶದಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಶೇ.೨೫ರಷ್ಟು ಪ್ರವೇಶಾವಕಾಶ ಹೆಚ್ಚಿಸಲಾಗುತ್ತಿದೆ. ಇದರಿಂದ ಈವರೆಗೆ ವಿದ್ಯಾರ್ಥಿ ನಿಲಯ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದ ಸುಮಾರು ೨೫ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದೀಗ ಅನುಕೂಲವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಶೇ. ೨೫ರಷ್ಟು ಪ್ರವೇಶಾವಕಾಶ ಹೆಚ್ಚಿಸುವ ಹಾಗೂ ಇದರಿಂದ ಉಂಟಾಗುವ ಹೆಚ್ಚುವರಿ ವೆಚ್ಚವನ್ನು ವಿದ್ಯಾಸಿರಿ ಯೋಜನೆಗೆ ಒದಗಿಸುವ ಅನುದಾನದಿಂದ ಬಳಸಿಕೊಳ್ಳುವ ಇಲಾಖೆಯ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು ಈ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೇ ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು. ಇದೀಗ ಆರ್ಥಿಕ ಇಲಾಖೆ ಪ್ರಸ್ತಾವನೆಗೆ ಸಹಮತ ನೀಡಿರುವುದರಿಂದ ಅನುಷ್ಠಾನ ಕಾರ್ಯ ಶೀಘ್ರವೇ ಅಗಲಿದೆ ಎಂದು ವಿವರಿಸಿದ ಅವರು, ಈ ಪ್ರಸ್ತಾವನೆಯನ್ನು ಅನುಮೋದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ರಾಣಿ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ರಾಷ್ಟçಪತಿ ದ್ರೌಪದಿ ಮುರ್ಮು ಭಾಗಿ
ನವದೆಹಲಿ, ಸೆ. ೧೪: ರಾಷ್ಟçಪತಿ ದ್ರೌಪದಿ ಮುರ್ಮು ಅವರು ತಾ. ೧೭ ರಿಂದ ೧೯ ರವರೆಗೆ ಲಂಡನ್‌ಗೆ ಭೇಟಿ ನೀಡಲಿದ್ದು, ರಾಣಿ ಎಲಿಜಬೆತ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದೆ. ಬ್ರಿಟನ್ ರಾಣಿ ಎಲಿಜಬೆತ್ ಅವರು ತಾ. ೮ ರಂದು ನಿಧನರಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟçಪತಿ ಜಗದೀಪ್ ಧನಖರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ಅವರ ಸಂತಾಪ ಸೂಚಿಸಿದ್ದಾರೆ. ಭಾರತದ ಸಂತಾಪವನ್ನು ತಿಳಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೆಪ್ಟೆಂಬರ್ ೧೨ ರಂದು ಇಲ್ಲಿನ ಬ್ರಿಟಿಷ್ ಹೈಕಮಿಷನ್ ಕಚೇರಿಗೆ ಭೇಟಿ ನೀಡಿದ್ದರು. ಭಾರತ ಕೂಡ ಭಾನುವಾರ ರಾಷ್ಟಿçÃಯ ಶೋಕಾಚರಣೆ ಆಚರಿಸಿತು. ಬ್ರಿಟನ್ ರಾಣಿ ಎಲಿಜಬೆತ್ ಅವರು ಕಾಮನ್‌ವೆಲ್ತ್ನ ಮುಖ್ಯಸ್ಥರಾಗಿ ವಿಶ್ವದಾದ್ಯಂತ ಲಕ್ಷಾಂತರ ಜನರ ಕಲ್ಯಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.