ಚೆಯ್ಯಂಡಾಣೆ, ಸೆ. ೧೪: ಕಕ್ಕಬೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ನೆಲಜಿ ಗ್ರಾಮದ (ಮುಂಬೈಯಲ್ಲಿ ಉದ್ಯೋಗದಲ್ಲಿರುವ) ಆಶಿಷ್ ಪ್ರಿಂಟರ್ ಅನ್ನು ಉಚಿತವಾಗಿ ನೀಡಿದ್ದಾರೆ.
ಈ ಸಂದರ್ಭ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಪನ್ ಅಯ್ಯಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್, ಮುಖ್ಯ ಶಿಕ್ಷಕಿ ಸುಮಯ್ಯ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.