ಮಡಿಕೇರಿ, ಸೆ. ೧೪: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಒಂದು ಸಂಸ್ಥೆಯಾಗಿದೆ. ಅಕಾಡೆಮಿ ವತಿಯಿಂದ ಪ್ರತಿ ೨ ವರ್ಷಗಳಿಗೊಮ್ಮೆ ಶ್ರೇಷ್ಠ ಪುಸ್ತಕ ಪ್ರಶಸ್ತಿ ನೀಡಲಾಗುತ್ತಿದ್ದು, ಜನವರಿ ೨೦೨೧ ರಿಂದ ಡಿಸೆಂಬರ್ ೨೦೨೨ ರಲ್ಲಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕ ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಲೇಖಕರು ನಿಗದಿತ ಅರ್ಜಿ ನಮೂನೆಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಜನವರಿ ೪, ೨೦೨೩, ಸಂಜೆ ೫.೩೦ ರೊಳಗೆ ಈ ಅಕಾಡೆಮಿ ವಿಳಾಸಕ್ಕೆ ಕಳುಹಿಸುವುದು, ಪುಸ್ತಕಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಠ ೨ ಪ್ರಶಸ್ತಿ ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ ರೂ. ೨೫ ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುವುದು, ಅರ್ಜಿ ನಮೂನೆ ಹಾಗೂ ಇತರ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ ತಿತಿತಿ.ಞsಣಚಿಛಿಚಿಜemಥಿ.iಟಿ ವೀಕ್ಷಿಸಬಹುದಾಗಿದೆ ಹಾಗೂ ಅಕಾಡೆಮಿ ಕಚೇರಿ ದೂರವಾಣಿ ೦೮೦-೨೯೭೨೧೫೫೦/೪೯ನ್ನು ಸಂಪರ್ಕಿಸುವAತೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇಒ ಡಾ. ಎ.ಎಂ. ರಮೇಶ್ ತಿಳಿಸಿದ್ದಾರೆ.