ಮಡಿಕೇರಿ, ಸೆ. ೧೪: ಕೊಡಗು ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣವು ಶೇ. ೮೨ ರಷ್ಟು ಇದ್ದು, ಸಂಪೂರ್ಣ ಸಾಕ್ಷರತೆ ಹೊಂದುವAತಾಗಲು ಪ್ರಯತ್ನಗಳು ನಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಲೋಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ನಡೆದ ಅಂರ‍್ರಾಷ್ಟಿçÃಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಓದು ಮತ್ತು ಬರೆಯುವುದನ್ನು ಕಲಿಯಬೇಕು. ಕೊಡಗು ಜಿಲ್ಲೆಯನ್ನು ಶೇ. ೧೦೦ ರಷ್ಟು ಸಾಕ್ಷರತಾ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರೂ ಕೈಜೋಡಿಸು ವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ‘ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಡಿಜಿಟಲೀಕರಣದ ಬಳಕೆಯಲ್ಲಿ ಹಿಂದೆ ಇರುತ್ತಾರೆ. ಆದ್ದರಿಂದ ಕಲಿಕೆ ನಿರಂತರ ವಾಗಿರುತ್ತದೆ. ಅಪ್‌ಡೇಟ್ ಮಾಹಿತಿಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದರು.’

‘ಸಾಕ್ಷರತಾ ಕಾರ್ಯಕ್ರಮಗಳು ಜಿಲ್ಲೆಯನ್ನು ಸಾಕ್ಷರ ಸಮೃದ್ಧ, ಸುಸ್ಥಿರ ಮತ್ತು ಅಭಿವೃದ್ಧಿ ನಾಡನ್ನಾಗಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳು ಎಂಬುದನ್ನು ಮನವರಿಕೆ ಮಾಡಿಕೊಂಡಿದ್ದೇನೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರ ಮನೆ ಹಾಗೂ ಮನವನ್ನು ತಲುಪಿ, ಮಹಿಳೆ ಮತ್ತು ಶಿಕ್ಷಣ ವಂಚಿತ ವರ್ಗದವರ ಕಲಿಕೆಗಾಗಿ ಸಾಕ್ಷರತಾ ಕಾರ್ಯಕ್ರಮವು ಜನಾಂದೋಲನಗೊಳ್ಳಲು ಕಾಯಾ, ವಾಚಾ, ಮನಸಾ ಪಾಲ್ಗೊಂಡು ಸೇವೆ ಸಲ್ಲಿಸುವ ಸಂಕಲ್ಪ ಮಾಡಿಕೊಂಡಿದ್ದೇನೆ.

ಅನಕ್ಷರಸ್ಥರೆಲ್ಲರೂ ಅಕ್ಷರ ಕಲಿತು ಸಾಕ್ಷರಸ್ಥರಾಗಿ ಕೌಶಲಾಭಿವೃದ್ಧಿ ಹೊಂದಲು ಹಾಗೂ ಕಲಿಯುತ್ತಿರುವ ಸಮಾಜದ ನಿರ್ಮಾಣಕ್ಕಾಗಿ ನಾನು ಕಲಿತ ಋಣವನ್ನು ಕಲಿಸಿ ತೀರಿಸುತ್ತೇನೆಂದು ಪ್ರಮಾಣೀಕರಿ ಸುತ್ತೇನೆ ಎಂದು ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.’

ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ, ಕೊಡಗು ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಒಂದು ಹೆಜ್ಜೆ ಮುಂದೆ ಇದೆ. ಆದರೆ ಹಾಡಿಗಳಲ್ಲಿ ಇನ್ನೂ ಸಹ ಸಾಕ್ಷರತೆ ಪ್ರಮಾಣ ಹೆಚ್ಚಿಸಬೇಕು ಎಂದರು. ಜಿಲ್ಲೆಯಲ್ಲಿ ಇನ್ನೂ ೪೫ ಸಾವಿರ ಜನರು ಸಾಕ್ಷರತೆ ಪಡೆಯ ಬೇಕಿದೆ. ಆ ನಿಟ್ಟಿನಲ್ಲಿ ಹೊಸ ಸರ್ವೆ ಮಾಡಲಾಗುತ್ತಿದೆ ಎಂದರು.

ಜಿಲ್ಲಾ ಸಾಕ್ಷರತಾ ಅಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿ, ೧೯೬೫ ರಲ್ಲಿ ಇರಾನ್‌ನ ಟೆಹರಾನ್‌ನಲ್ಲಿ ಅನಕ್ಷರತೆಯ ನಿರ್ಮೂಲನೆ ಕುರಿತು ನಡೆದ ಅಂರ‍್ರಾಷ್ಟಿçÃಯ ಸಮ್ಮೇಳನದಲ್ಲಿ ಸಾಕ್ಷರತಾ ದಿನದ ಕುರಿತು ಕಲ್ಪನೆ ಮೂಡಿಬಂದಿತು. ಶಿಕ್ಷಣವನ್ನು ಎಲ್ಲರಿಗೂ ತಲುಪಿಸುವ ಮಹತ್ತರ ಉದ್ದೇಶ ಮತ್ತು ಗುರಿಯೊಂದಿಗೆ ಯುನೆಸ್ಕೋ ಸೆಪ್ಟೆಂಬರ್ ೮, ೧೯೬೬ ರಲ್ಲಿ ಸಾಕ್ಷರತಾ ದಿನ ಆಚರಿಸಲು ನಿರ್ಧರಿಸಲಾಯಿತು ಎಂದು ಹೇಳಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ಜಿ.ಪಂ. ಉಪ ಕಾರ್ಯದರ್ಶಿ ಜಿ. ಧನರಾಜು, ಯೋಜನಾ ನಿರ್ದೇಶಕ ಜಗದೀಶ್, ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ಎನ್. ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ರಾಷ್ಟಿçÃಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಜಿಲ್ಲಾ ಉಪ ಸಮನ್ವಯಾಧಿಕಾರಿ ಶೋಭ, ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ, ಚಿತ್ರಕಲಾ ಶಿಕ್ಷಕ ಉ.ರಾ. ನಾಗೇಶ್ ಕಾರ್ಯಕ್ರಮ ಸಹಾಯಕರಾದ ಸಿ.ಕೆ. ರಾಜೇಶ್ವರಿ ಇತರರು ಇದ್ದರು.