ಮಡಿಕೇರಿ, ಸೆ. ೧೫: ವೀರಾಜಪೇಟೆ ವಿಭಾಗದ, ವೀರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಮರಂದೋಡ ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು ಹಲವು ದಿನಗಳಿಂದ ಅಲ್ಲಿನ ಗ್ರಾಮಸ್ಥರಾದ ಚೋಯಮಾಡಂಡ, ನೀಡುಮಾಡಂಡ, ಅನ್ನಾಡಿಯಂಡ, ಮುಕ್ಕಾಟಿ ಕುಟುಂಬಸ್ಥರ ಗದ್ದೆ ಹಾಗೂ ತೋಟಗಳಿಗೆ ಲಗ್ಗೆ ಇಟ್ಟು ಕೃಷಿ ನಷ್ಟ ಮಾಡುತ್ತಿರುವುದರಿಂದ ಕುಂಜಿಲ - ಕಕ್ಕಬ್ಬೆ ಗ್ರಾಮ ಪಂಚಾಯಿತಿ ಸದಸ್ಯ ಚೋಯಮಾಡಂಡ ಹರೀಶ್ ಮೊಣ್ಣಪ್ಪ ಹಾಗೂ ಮರಂದೋಡ ಗ್ರಾಮದ ಗ್ರಾಮಸ್ಥರ ಮನವಿಯ ಮೇರೆಗೆ ತಾ. ೧೬ರಿಂದ (ಇಂದಿನಿAದ) ತಾ. ೧೭ರವರೆಗೆ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ಮರಂದೋಡ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಕೋಕೇರಿ, ಚೇಲಾವರ, ನರಿಯಂದಡ, ಕರಡ ಈ ಗ್ರಾಮಗಳಲ್ಲಿನ ಗ್ರಾಮಸ್ಥರು ಹಾಗೂ ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಲಯ ಅರಣ್ಯಾಧಿಕಾರಿ ಕೋರಿಕೊಂಡಿದ್ದಾರೆ.