ವೀರಾಜಪೇಟೆ, ಸೆ. ೧೫: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾಕೋಶ, ಎನ್.ಎಸ್.ಎಸ್ ಘಟಕ ಹಾಗೂ ಪೊನ್ನಂಪೇಟೆ ಜೆಸಿಐ ನಿಸರ್ಗ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ‘ಕಾನೂನು ಅರಿವು’ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಕೀಲ ಚೋವಂಡ ಕೆ.ಪೊನ್ನಣ್ಣ ಮಾತನಾಡಿ, ನಮ್ಮ ದೈನಂದಿನ ಸಾಮಾಜಿಕ ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಕಾನೂನುಗಳು ಅನ್ವಯವಾಗುತ್ತದೆ. ಆಡಳಿತ ವ್ಯವಸ್ಥೆಯಲ್ಲಿ ಕಾನೂನಿನ ಜಾರಿ ಹಾಗೂ ಅದರ ಸುವ್ಯವಸ್ಥೆಗಾಗಿ ಹಲವಾರು ಅಂಗಗಳು ಒಗ್ಗೂಡಿ ಕಾರ್ಯನಿರ್ವಹಿಸುತ್ತಿವೆ. ಆದ್ದರಿಂದ ಇಂದಿನ ಪ್ರಜ್ಞಾವಂತ ಜನರು ಕಾನೂನುಗಳ ಬಗ್ಗೆ ತಿಳಿದುಕೊಂಡು ಇತರರಿಗೂ ಅದರ ಬಗ್ಗೆ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ತಿಳಿಸಿದರು. ಜೆಸಿಐ ನಿಸರ್ಗದ ಅಧ್ಯಕ್ಷ ಎ.ಪಿ.ದಿನೇಶ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪಾಂಶುಪಾಲ ಡಾ. ಕೆ.ಸಿ.ದಯಾನಂದ ಮಾತನಾಡಿದರು.

ವೇದಿಕೆಯಲ್ಲಿ ಜಿ.ಪಂ. ಮಾಜಿ ಸದಸ್ಯ ಟಾಟು ಮೊಣ್ಣಪ್ಪ, ಜೆಸಿಐ ಎಸ್.ಎಂ.ಎ. ಸಂಯೋಜಕ ಕಿರಣ್, ಜೆಸಿಐನ ನಿಕಟಪೂರ್ವ ಅಧ್ಯಕ್ಷ ಎಂ.ಎನ್. ವನಿತ್‌ಕುಮಾರ್, ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಎಂ.ಬಿ. ದಿವ್ಯ ಹಾಗೂ ಸ್ವಯಂ ಸೇವಕ - ಸೇವಕಿಯರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಜೆಸಿಐ ಸಂಸ್ಥೆಯ ಶರತ್ ಸೋಮಣ್ಣ ಸ್ವಾಗತಿಸಿ, ಯೋಜನಾ ನಿರ್ದೇಶಕ ಮುಂಡೋಳAಡ ಬೋಪಣ್ಣ ವಂದಿಸಿದರು.