ಕುಶಾಲನಗರ, ಸೆ.೧೫: ಅರಣ್ಯ ಇಲಾಖೆ ವತಿಯಿಂದ ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಆದಿವಾಸಿ ಸಮುದಾಯ ಮತ್ತು ಗ್ರಾಮ ಅರಣ್ಯ ಸಮಿತಿ ಸದಸ್ಯರುಗಳಿಗೆ ಜೇನು ಸಾಕಾಣಿಕೆ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.

ಕುಶಾಲನಗರ ಗಂಧದ ಕೋಟೆಯ ಅರಣ್ಯ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಕಾರ್ಯಗಾರವನ್ನು ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಬಿಎನ್. ನಿರಂಜನ್ ಮೂರ್ತಿ ಅವರು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಅಪೂರ್ವ, ನೀತಿ ಮಹೇಶ್ ಅವರುಗಳು ಶಿಬಿರಾರ್ಥಿಗಳಿಗೆ ಜೇನು ಕೃಷಿ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು. ಸಮೀಪದ ಬೆಟ್ಟಗೇರಿ ಗ್ರಾಮದ ತೋಟದಲ್ಲಿ ಜೇನು ಸಾಕಾಣಿಕೆ ಕುರಿತು ಶಿಬಿರಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಲಾಯಿತು. ಪ್ರಗತಿ ಪರ ಜೇನು ಕೃಷಿಕರಾದ ಅರೆಯೂರು ಜೋಯಪ್ಪ ಅವರು, ತರಬೇತಿಯ ಕುರಿತು ಅನಿಸಿಕೆ ಮತ್ತು ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು. ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರದ ಅಧಿಕಾರಿ ಅರುಣ್, ಸುಗಮದಾರ ಹೆಚ್.ಸಿ ಗೋವಿಂದ್ ರಾಜು ಮತ್ತು ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಇದ್ದರು.

ಸುನಂದ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ ಶಿವರಾಮ್ ಸ್ವಾಗತಿಸಿ, ಉಪ ವಲಯ ಅರಣ್ಯಾಧಿಕಾರಿ ಕೆ.ಪಿ ರಂಜನ್ ವಂದಿಸಿದರು.