ಮಡಿಕೇರಿ, ಸೆ. ೧೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ. ೧೭ ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ನಡೆಯಲಿದೆ.
ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ, ಎಂ.ಪಿ. ಸುಜಾ ಕುಶಾಲಪ್ಪ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ನಾಪಂಡ ಎಂ. ರವಿಕಾಳಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ದೇವದಾಸ್, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ ನಾಮ ನಿರ್ದೇಶಕ ಎಚ್.ಎನ್. ಸುಬ್ರಮಣ್ಯ, ವಿಶ್ವಕರ್ಮ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ಬಿ. ಜಗದೀಶ್ ಆಚಾರ್ಯ, ಕೋಟೇಕಾರು ಸೀತಾರಾಮ, ಗೋಸೇವಾಶ್ರಮ ಟ್ರಸ್ಟ್ನ ಅಧ್ಯಕ್ಷ ಯೋಗಾಚಾರ್ಯ ಶ್ರೀ ಪುಂಡೀಕಾಕ್ಷ ಬೆಳ್ಳೂರು, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.