ಮಡಿಕೇರಿ, ಸೆ. ೧೬: ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಹಾಕಿ ಸ್ಪರ್ಧೆ ಹಾಗೂ ಜಿಮ್ನಾಸ್ಟಿಕ್ ಆಯ್ಕೆ ಪ್ರಕ್ರಿಯೆ ತಾ. ೨೦ ಮತ್ತು ೨೧ ರಂದು ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆಯಲಿದೆ.
ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನಿಗದಿತ ಸ್ಥಳಗಳಲ್ಲಿ ಬೆಳಿಗ್ಗೆ ೯ ಗಂಟೆಗೆ ವರದಿ ಮಾಡಿಕೊಳ್ಳಬೇಕು. ಈ ಕ್ರೀಡಾಕೂಟಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಹಾಕಿ ತಂಡಗಳು ಮಾತ್ರ ವಿಭಾಗ ಮಟ್ಟದಲ್ಲಿ ಭಾಗವಹಿಸಬಹುದು. ಮತ್ತು ಜಿಮ್ನಾಸ್ಟಿಕ್ ಕ್ರೀಡೆಗೆ ಸಂಬAಧಿಸಿದAತೆ ವಿಭಾಗ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ಮಾತ್ರ ಇದ್ದು ಜಿಲ್ಲೆಯ ಆಸಕ್ತ ಜಿಮ್ನಾಸ್ಟಿಕ್ ಕ್ರೀಡಾಪಟುಗಳು ಸಹ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ದೂ. ಮಹಾಬಲ ೯೯೮೦೮೮೭೪೯೯, ಮಡಿಕೇರಿ ಜಯರಾಂ ೯೪೮೦೦೧೯೮೧೫, ಸೋಮವಾರಪೇಟೆ, ಸುಬ್ಬಯ್ಯ ೮೧೯೭೭೯೦೩೫೦ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.