ಶನಿವಾರಸಂತೆ, ಸೆ. ೧೫: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಸಾಪ ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ತಾ. ೧೬ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಕಟ್ಟೆಮನೆ ಪುಟ್ಟಸ್ವಾಮಿ ದತ್ತಿನಿಧಿ - ಕಟ್ಟೆಮನೆ ಸುಲೋಚನಮ್ಮ’ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಮತ್ತು ಜಾನಪದ ಗೀತೆ ಗಾಯನ ಸ್ಪರ್ಧೆ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಲಿದ್ದಾರೆ. ಟಿ.ಪಿ. ರಮೇಶ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ದತ್ತಿನಿಧಿ ಪ್ರಾಯೋಜಕ ಎಸ್.ಪಿ. ಪ್ರಸನ್ನ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶಾಲಿನಿಪ್ರಕಾಶ್, ಮುಖ್ಯಶಿಕ್ಷಕ ಬಿ.ಟಿ. ವಿಶ್ವನಾಥ್, ನಿವೃತ್ತ ಸೈನಿಕ ಟಿ.ಎಸ್. ನಾಗರಾಜ್, ಪತ್ರಕರ್ತ ಎಚ್.ಆರ್. ಹರೀಶ್ ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ಹೋಬಳಿ ಘಟಕದ ಅಧ್ಯಕ್ಷ ಬಿ.ಬಿ. ನಾಗರಾಜ್ ತಿಳಿಸಿದ್ದಾರೆ.