ಮಡಿಕೇರಿ, ಸೆ. ೧೬: ಗೋಣಿಕೊಪ್ಪ ಕಾವೇರಿ ದಸರಾ ಸಮಿತಿಯ ‘ಲೋಗೋ’ವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ನಗರದ ಜಿ.ಪಂ. ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ಕಾವೇರಿ ದಸರಾ ಸಮಿತಿ ಅಧ್ಯಕ್ಷ ಬಿ.ಎನ್. ಪ್ರಕಾಶ್, ಕಾರ್ಯಾಧ್ಯಕ್ಷ ಸಿ.ಕೆ. ಬೋಪಣ್ಣ, ಪ್ರಧಾನ ಕಾರ್ಯದರ್ಶಿ ಜಪ್ಪು ಸುಬ್ಬಯ್ಯ, ಪ್ರಮುಖರಾದ ಗಿರೀಶ್ ಗಣಪತಿ, ಕೆ. ರಾಜೇಶ್, ರಾಮಕೃಷ್ಣ ಹಾಜರಿದ್ದರು.