ಕೂಡಿಗೆ, ಸೆ. ೧೫: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರೊಂದಿಗೆ ವಿಜ್ಞಾನಕ್ಕೆ ಸಂಬAಧಿಸಿದ ಪುಸ್ತಕಗಳು ಹಾಗೂ ವಿಜ್ಞಾನಿಗಳ ಜೀವನ ಚರಿತ್ರೆಯ ವಿಚಾರಗಳನ್ನು ಶಿಕ್ಷಕರು ವಿದ್ಯಾರ್ಥಿ ಗಳಿಗೆ ತಿಳಿಸಬೇಕೆಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಪ್ರಾಂಶುಪಾಲರೂ ಆದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ.ವಿ. ಮಲ್ಲೇಶಪ್ಪ ಕರೆ ನೀಡಿದರು.

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಾಹಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೂಡಿಗೆ ಡಯಟ್‌ನ ವತಿಯಿಂದ ಶಾಲಾ ವಿಜ್ಞಾನ ಸಂಘ, ಇಕೋ ಕ್ಲಬ್, ಎನ್.ಎಸ್.ಎಸ್. ಘಟಕ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕದ ಆಶ್ರಯ ದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ತಾಲೂಕುಮಟ್ಟದ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧಾ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯುವ ವಿದ್ಯಾರ್ಥಿಗಳು ವೈಜ್ಞಾನಿಕ ಅನ್ವೇಷಣೆ ಮತ್ತು ವಿಶ್ಲೇಷಣಾತ್ಮಕ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಲು ಇಂತಹ ಸ್ಪರ್ಧೆಗಳು ಹಾಗೂ ವೇದಿಕೆಗಳು ಸಹಕಾರಿ ಯಾಗಿವೆ ಎಂದರು. ಚಿಂತಕ, ಸಾಹಿತಿ ಭಾರದ್ವಾಜ ಕೆ. ಆನಂದತೀರ್ಥ ಮಾತನಾಡಿ, ನಾವು ಕೈಗೊಳ್ಳುವ ಯಾವುದೇ ಸಂಶೋಧನೆಗಳು ಪ್ರಕೃತಿಯ ಸಂರಕ್ಷಣೆಗೆ ಪೂರಕವಾಗಿರ ಬೇಕೇ ವಿನಃ ಪ್ರಕೃತಿ ವಿರುದ್ಧವಾಗಿದ್ದರೆ ಭೂಮಿಗೆ ಉಳಿಗಾಲವಿಲ್ಲ. ನಾವು ನಮ್ಮ ಭೂಮಿ ಮತ್ತು ಪ್ರಕೃತಿಯ ಉಳಿವಿಗಾಗಿ ಜಾಗೃತಿ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಮಾತನಾಡಿ, ನಾಟಕದ ಮೂಲಕ ಯುವ ಪ್ರತಿಭೆಗಳಲ್ಲಿ ವೈಜ್ಞಾನಿಕ ಚಿಂತನೆ ಹಾಗೂ ಪರಿಸರ ಕಾಳಜಿ ಬೆಳೆಸಲು ಸಾಧ್ಯ ಎಂದರು. ನಾಟಕವು ಸಮಾಜ ಮತ್ತು ವಿಜ್ಞಾನದ ಸೂಕ್ಷö್ಮ ಸಂವೇದನೆಗಳನ್ನು ಅಭಿವ್ಯಕ್ತಿಗೊಳಿಸುವ ಮೂಲಕ ವಿಜ್ಞಾನವನ್ನು ಸಮಾಜಕ್ಕೆ ಮುಟ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಸೃಜನಶೀಲ ಸಂಸ್ಕೃತಿ ಬೆಳೆಸುವುದರೊಂದಿಗೆ ಅವರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಸಹಕಾರಿಯಾಗಿವೆ ಎಂದರು.

ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು. ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎನ್. ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧಾ ಸಂಯೋಜಕ ಹೆಚ್.ಆರ್. ಶೇಖರ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಕೋಶಾಧಿಕಾರಿ ಎ.ಸಿ. ಮಂಜುನಾಥ್, ಶಾಲಾ ಮುಖ್ಯ ಶಿಕ್ಷಕಿ ಹೆಚ್.ಎಸ್. ಸುಜಾತ, ನಿವೃತ್ತ ಶಿಕ್ಷಕರಾದ ಎಂ. ರಂಗಸ್ವಾಮಿ, ಡಿ.ವಿ. ಗಣೇಶ್, ಗ್ರಾಮ ದೇವಾಲಯ ಸಮಿತಿ ಅಧ್ಯಕ್ಷ ಜವರೇಗೌಡ, ದಾನಿಗಳಾದ ಕೆ.ಎಸ್. ರಾಜಾಚಾರಿ, ಪವನ್ ಕುಮಾರ್, ಸಂಪನ್ಮೂಲ ವ್ಯಕ್ತಿ ಜಿ. ಶ್ರೀನಾಥ್, ಕೂಡಿಗೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎ. ಯೋಗೇಶ್, ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಸ್.ಎಂ. ಇಬ್ರಾಹಿಂ, ಪತ್ರಕರ್ತ ಹೆಚ್.ಎಂ. ರಘು, ವಿಜ್ಞಾನ ಸಂಘದ ಶಿಕ್ಷಕಿ ಬಿ.ಡಿ. ರಮ್ಯ, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಅನ್ಸಿಲಾ ರೇಖಾ, ಎಸ್.ಎಂ. ಗೀತಾ, ವೈ.ಎಂ.ಸರಸ್ವತಿ ಇದ್ದರು. ಶಿಕ್ಷಕಿ ಅನ್ಸಿಲಾ ರೇಖಾ ನಿರ್ವಹಿಸಿದರು. ಶಿಕ್ಷಕ ಕೆ. ಗೋಪಾಲಕೃಷ್ಣ ಸ್ವಾಗತಿಸಿದರು. ಶಿಕ್ಷಕಿ ಎಸ್.ಎಂ. ಗೀತಾ ವಂದಿಸಿದರು.

ತಾಲೂಕಿನ ವಿವಿಧ ಪ್ರೌಢಶಾಲೆ ಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಪಾಲ್ಗೊಂಡು ವಿಜ್ಞಾನ ವಿಚಾರಗೋಷ್ಠಿ ಹಾಗೂ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.