ಮಡಿಕೇರಿ, ಸೆ. ೧೫: ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಾಹಿತಿ ಕವಿತಾ ರೈ, ಸಾಹಿತಿಗಳು ಬೇರೆ ಬೇರೆ ಸಾಹಿತಿಗಳೊಂದಿಗೆ, ಸಂಘಟನೆಯೊAದಿಗೆ, ಭೇಟಿ, ಸಂವಾದ ಮಾಡುವ ಮೂಲಕ ತಮ್ಮ ಸಾಹಿತ್ಯ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು. ಕೊಡಗಿನಲ್ಲಿ ಕನ್ನಡ ಮಾತ್ರವಲ್ಲ ಕೊಡವ, ಅರೆ ಭಾಷೆ, ಬ್ಯಾರಿ, ತುಳು ಎಲ್ಲ ಭಾಷೆಗಳ ಸಾಹಿತಿಗಳಿದ್ದಾರೆ. ಅವರೆಲ್ಲರನ್ನು ಸೇರಿಸಿ ಸಂಘವನ್ನು ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಓರ್ವ ಮಹಿಳೆ ಲೇಖಕಿ ಅಥವಾ ಸಾಹಿತಿಯಾಗಿದ್ದರೆ ಅವರ ಮನೆ ಮತ್ತು ಸುತುಮುತ್ತಲ ಪ್ರದೇಶವೂ ಕೂಡ ಸಾಹಿತ್ಯಿಕ ವಲಯವಾಗಿರುತ್ತದೆ. ಅದರಲ್ಲೂ ಮಹಿಳಾ ಶಿಕ್ಷಕಿ ಸಾಹಿತಿಯಾಗಿದ್ದರೆ ಆ ಶಾಲೆಯ ವಿದ್ಯಾರ್ಥಿಗಳು ಸಹ ಸಾಹಿತ್ಯಿಕ ಪರಸರದಲ್ಲಿರುತ್ತಾರೆ. ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಬAಧಿತ ಯಾವುದೇ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಸಂಘದ ಬೆಳವಣಿಗೆಗೆ ಎಲ್ಲ ಸದಸ್ಯರು ಕೈ ಜೋಡಿಸಬೇಕು. ಹೆಸರಿಗೆ ಮಾತ್ರ ಪದಾಧಿಕಾರ ಎನ್ನುವ ನೀತಿಬಿಟ್ಟು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸಂಘದ ಅಧ್ಯಕ್ಷೆ ಶೋಭಾ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೆಕಲ್ ನವೀನ್, ಮಡಿಕೇರಿ ನಗರಸಭೆಯ ನಿವೃತ್ತ ಆಯುಕ್ತೆ ಪುಷ್ಪಾವತಿ, ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ಉಳ್ಳಿಯಡ ಡಾಟಿ ಪೂವಯ್ಯ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರೇವತಿ ರಮೇಶ್ ನಿರೂಪಿಸಿದರೆ, ಉಪಾಧ್ಯಕ್ಷೆ ಡಾ. ಕಾವೇರಿ ಪ್ರಕಾಶ್ ಸ್ವಾಗತಿಸಿ, ಕಟ್ರತನ ಲಲಿತಾ ಅಯ್ಯಣ್ಣ ವಂದಿಸಿದರು.