ಬೆAಗಳೂರು, ಸೆ. ೧೫: ಕರ್ನಾಟಕದÀ ವಿಧಾನ ಪರಿಷತ್‌ನಲ್ಲಿ ಮತಾಂತರ ನಿಷೇಧ ವಿಧೇಯಕ ಗುರುವಾರ ಬಹುಮತದಿಂದ ಅಂಗೀಕಾರಗೊAಡಿತು. ಇದರಿಂದಾಗಿ ಈ ಹಿಂದೆ ವಿಧಾನಸಭೆಯಲ್ಲಿ ಅಂಗೀಕಾರಕೊAಡಿದ್ದ ಮಸೂದೆಯ ಜಾರಿಗೆ ಪೂರ್ಣ ಅಧಿಕಾರದೊಂದಿಗೆ ಕಾನೂನಾತ್ಮಕ ಅವಕಾಶ ಲಭ್ಯವಾಗಿದೆ.

ಮಸೂದೆಯ ಪ್ರತಿಯನ್ನು ಹರಿದು ಹಾಕಿ ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸದಸ್ಯರು ವಿಧೇಯಕ ವಿರೋಧಿಸಿ ಸಭಾತ್ಯಾಗ ಮಾಡಿದರು. ಆಡಳಿತಾರೂಢ ಬಿಜೆಪಿ ಸದಸ್ಯರು “ಭಾರತ್ ಮಾತಾಕೀ ಜೈ” ಎಂದು ಸ್ವಾಗತಿಸಿದರು; “ಹಿಂದೂ ವಿರೋಧಿ ಕಾಂಗ್ರೆಸ್‌ಗೆ ಧಿಕ್ಕಾರ” ಎಂದು ಘೋಷಣೆ ಕೂಗಿದರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಡಿಸಿದ್ದ ವಿಧೇಯಕವು ಪರಿಷತ್‌ನಲ್ಲಿ ದೀರ್ಘವಾದ ವಿವಾದಗಳೊಂದಿಗೆ ಗದ್ದಲಕ್ಕೆ ಕಾರಣವಾಗಿತ್ತು.

ಮಂಡನೆಗೆ ಪೂರ್ವಭಾವಿಯಾಗಿ ಬುಧವಾರದಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರಾಷ್ಟಿçÃಯ ಸ್ವಯಂಸೇವಕ ಸಂಘದ ಕಚೇರಿಯಲ್ಲಿ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯರ ಸಭೆ ನಡೆದಿತ್ತು. ಕೇಶವಕೃಪಾದಲ್ಲಿ ನಡೆದಿದ್ದ ಈ ಸಭೆÀಯಲ್ಲಿ ವಿಧೇಯಕ ಮಂಡನೆ ವೇಳೆ ಪ್ರಬಲವಾಗಿ ಸಮರ್ಥಿಸಿಕೊಳ್ಳುವ ಬಗ್ಗೆ ಸುದೀರ್ಘ ಚರ್ಚೆ ನಡೆದಿತ್ತು.

ಆರ್‌ಎಸ್‌ಎಸ್ ಕಾರ್ಯಾ ಲಯದಲ್ಲಿ ನಡೆದಿದ್ದ ಈ ಸಭೆಯಲ್ಲಿ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ತಿನÀ ಸರ್ಕಾರಿ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ, ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ತುಳಸಿ, ಮುನಿರಾಜುಗೌಡ,

ಕೆ.ಎಸ್. ನವೀನ್, ಪ್ರತಾಪಸಿಂಹ ನಾಯಕ, ಎಂ.ಕೆ. ಪ್ರಾಣೇಶ್ ಉಪಸ್ಥಿತರಿದ್ದರು.

ಈ ಹಿಂದೆ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿತ್ತು. ಆದರೆ ವಿಧಾನ ಪರಿಷತ್ತಿನಲ್ಲಿ ಮಸೂದೆ ಮಂಡಿಸಲು ತಡವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿತ್ತು. ಪ್ರಸ್ತುತ ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ೪೧

(ಮೊದಲ ಪುಟದಿಂದ) ಸದಸ್ಯರಿದ್ದು. ಕಾಂಗ್ರೆಸ್‌ನ ೨೬ ಮತ್ತು ಜೆಡಿಎಸ್ ನ ೮ ಮಂದಿ ಸದಸ್ಯರಿದ್ದಾರೆ. ಇದೀಗ ಬಿಜೆಪಿಯು ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಿರುವುದರಿಂದ ಮಸೂದೆಗೆ ಅಂಗೀಕಾರ ಪಡೆದುಕೊಳ್ಳಲು ಸುಲಭ ಸಾಧ್ಯವಾಯಿತು.

ಮತಾಂತರ ನಿಷೇಧ ಕಾಯ್ದೆಯ ಮುಖ್ಯಾಂಶಗಳು

* ಮತಾಂತರ ಅಗಬಯಸುವ ವ್ಯಕ್ತಿ ೬೦ ದಿನಗಳ ಮೊದಲು ಫಾರ್ಮ್- ೧ ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿ ಬಳಿ ಮಾಹಿತಿ ನೀಡತಕ್ಕದ್ದು.

* ಮತಾಂತರ ಮಾಡಿಸುವ ವ್ಯಕ್ತಿಯೂ ಕೂಡ ಒಂದು ತಿಂಗಳ ಮೊದಲು ಫಾರ್ಮ್- ೨ ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಮಾಹಿತಿ ನೀಡತಕ್ಕದ್ದು.

* ಮತಾಂತರವಾದ ಒಂದು ತಿಂಗಳ ಬಳಿಕ ‘ಡಿಕ್ಲರೇಷನ್ ಫಾರ್ಮ್’ ಅಥವಾ ಘೋಷಣಾ ಪತ್ರವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಭರ್ತಿ ಮಾಡಿ ನೀಡತಕ್ಕದ್ದು.

* ಡಿಕ್ಲರೇಷನ್ ಮಾಡಿದ ೨೧ ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ಗುರುತು ನೀಡತಕ್ಕದ್ದು.

* ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೋತ್ತರ ಘಟನೆಯ ಸಂಪೂರ್ಣ ಘಟನೆಯನ್ನು ದಾಖಲಿಸತಕ್ಕದ್ದು,

* ತಕರಾರುಗಳಿದ್ದಲ್ಲಿ ತಕರಾರು ಎತ್ತಿದ ವ್ಯಕ್ತಿ ಹಾಗೂ ತಕರಾರಿನ ಸ್ವರೂಪವನ್ನು ದಾಖಲಿಸತಕ್ಕದ್ದು

* ಮತಾಂತರ ಹೊಂದಿದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡತಕ್ಕದ್ದು.

* ತಕರಾರುಗಳಿದ್ದ ಪಕ್ಷದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇm ಅವರು ಸಂಬAಧ ಪಟ್ಟ ಇಲಾಖೆಗಳಾದ ಕಂದಾಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸೇರಿದಂತೆ ಇತರ ಸಂಬAಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡತಕ್ಕದ್ದು,

* ಮ್ಯಾಜಿಸ್ಟ್ರೇಟರಿಂದ ಮಾಹಿತಿ ಸ್ವೀಕರಿಸಿದ ಬಳಿಕ ಸಂಬAಧಪಟ್ಟ ಇಲಾSಯು ಮತಾಂತರ ಹೊಂದಿದ ವ್ಯಕ್ತಿಯ ಸಾಮಾಜಿಕ ಸ್ಥಾನಮಾನ ಹಾಗೂ ಸರ್ಕಾರದಿಂದ ಸಿಗುವ ಆರ್ಥಿಕ ಲಾಭಗಳ ಬಗ್ಗೆ ಸೂಕ್ತ ಕ್ರಮ ವಹಿಸುವುದು.