ಕೂಡಿಗೆ, ಸೆ. ೧೬: ಮಂಗಳೂರು ವಿಶ್ವವಿದ್ಯಾ ನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ ಸಾಂಸ್ಕೃತಿಕ ಹಾಗೂ ಕ್ರೀಡಾ ವೈಭವ-ಜ್ಞಾನ ಕಲರವ ೨೦೨೨ ಕಾರ್ಯಕ್ರಮ ನಡೆಯಿತು.
ಸಾಹಿತಿಗಳಾದ ಚೆಟ್ನಳ್ಳಿ ಮಹೇಶ್ ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸುವ ಮನೋಧರ್ಮ ಬೆಳೆಸಿಕೊಳ್ಳಬೇಕು. ನಾಗರಿಕತೆಯ ಪ್ರತೀಕವಾದ ಗುಣಲಕ್ಷಣಗಳನ್ನು ಹೊಂದಿರುವ ಮನುಷ್ಯ ಸಂಸ್ಕೃತಿಗಳ ಮೌಲ್ಯವನ್ನು ಮರೆಯುತ್ತಿದ್ದಾನೆ.
ತಿಳುವಳಿಕೆ ಮತ್ತು ನಡವಳಿಕೆ ಮೂಲಕ ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ಸಂವಹನದ ಮುಖಾಂತರ ಪರಿಚಯ ಮಾಡಿಕೊಡುವ ಜವಾಬ್ದಾರಿ ಮತ್ತು ಎಚ್ಚರಿಕೆ ಇರಬೇಕು ಎಂದರು.
ಸAಸ್ಥೆಯ ಪ್ರಭಾರ ನಿರ್ದೇಶಕ ಪ್ರೊ. ಕೆ.ಎಸ್. ಚಂದ್ರಶೇಖರಯ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಮ್ಮ ಸಂಸ್ಥೆಯು ಕೊಡಗು ವಿಶ್ವವಿದ್ಯಾನಿಲಯ ಆಗುವುದಕ್ಕೆ ಬೇಕಾಗುವ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಹೊಂದಿದೆ.
ಸಂಸ್ಥೆಯಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಉನ್ನತ ವ್ಯಾಸಂಗವನ್ನು ಪಡೆದುಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದು ನುಡಿದರು.
ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳಾದ ಡಾ. ಕೆ.ಕೆ. ಧರ್ಮಪ್ಪ ವಾರ್ಷಿಕ ವರದಿ ಮಂಡಿಸಿದರು. ಈ ಸಂದರ್ಭ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮಿತಿಯ ಸಂಯೋಜಕ ರಾಜಕುಮಾರ್ ಮೇಟಿ, ದೈಹಿಕ ಶಿಕ್ಷಕ ಹೆಚ್.ಆರ್. ವಿಜಯ್, ವಿವಿಧ ವಿಭಾಗದ ಉಪನ್ಯಾಸಕರು, ಬೋಧಕೇತರ ವೃಂದ, ತಾಂತ್ರಿಕ ವೃಂದ, ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.