ಕೂಡಿಗೆ, ಸೆ. ೧೫: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಾಲೆ ಮುಖ್ಯ ರಸ್ತೆಯಿಂದ ಹನುಮಂತಪುರ ಗ್ರಾಮದ ಕಡೆಗೆ ಹೋಗುವ ರಸ್ತೆ ಮತ್ತು ಹೆದ್ದಾರಿಗೆ ಹೊಂದಿಕೊAಡAತೆ ಇರುವ ಉಪ ಕಾಂಕ್ರೀಟ್ ರಸ್ತೆ ಮತ್ತು ಡಾಂಬರ್ ರಸ್ತೆಯು ಮೂರು ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ನವರು ನೆರವೇರಿಸಿದರು
ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆಗಳ ಅಭಿವೃದ್ಧಿಯಾದಲ್ಲಿ ಗ್ರಾಮದ ಅಭಿವೃದ್ಧಿಯಾಗುವುದು. ಜೊತೆಯಲ್ಲಿ ಕಾವೇರಿ ನೀರಾವರಿ ನಿಗಮದ ಮೂಲಕವು ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ ಉಪಾಧ್ಯಕ್ಷೆ ಅರುಣ್ ಕುಮಾರಿ, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ, ಸದಸ್ಯರಾದ ಮಹದೇವ, ಪರಮೇಶ್, ಚಂದ್ರುಶೇಖರ್ ಜೋಗಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀನಿವಾಸ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಸ್ಕರ್ ನಾಯಕ್, ಅಭಿವೃದ್ಧಿ ಅಧಿಕಾರಿ ಎಂ, ಅರುಣ್ ಬಾಸ್ಕರ್, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸೈಜನ್ ಪೀಟರ್, ಸೇರಿದಂತೆ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.