ಕೂಡಿಗೆ, ಸೆ. ೧೬: ವಿದ್ಯಾವರ್ಧಕ ಸಂಘ ಹೆಬ್ಬಾಲೆ, ಹಿರಿಯ ವಿದ್ಯಾರ್ಥಿ ಗಳ ಸಂಘ ಹೆಬ್ಬಾಲೆ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹೆಬ್ಬಾಲೆ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹೆಬ್ಬಾಲೆ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ನಿವೃತ್ತ ಕಸ್ಟಮ್ ಅಧಿಕಾರಿ ಹೆಚ್.ಡಿ. ನೀಲಕಂಠರಾಯ ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಮೆಲುಕು ಹಾಕುತ್ತಾ ತಮ್ಮ ವೃತ್ತಿ ಬದುಕಿನ ಸಾಧನೆಯ ಅನುಭವಗಳನ್ನು ವಿದ್ಯಾರ್ಥಿಗಳಲ್ಲಿ ಹಂಚಿಕೊAಡರು. ಶಾಲೆಯ ಹಳೆ ವಿದ್ಯಾರ್ಥಿ ಉದ್ಯಮಿ ಆರ್.ಆರ್. ಕುಮಾರ್ ಮಾತನಾಡಿ, ವಿದ್ಯಾರ್ಥಿ ಜೀವನದ ಬಡತನದ ಅನುಭವಗಳನ್ನು ಹಂಚಿಕೊAಡು ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುತ್ತಾ ಈ ಸಂಸ್ಥೆಯಲ್ಲಿ ಅಪೂರ್ಣಗೊಂಡಿರುವ ಸಭಾ ಭವನವನ್ನು ಪೂರ್ಣ ಗೊಳಿಸಿಕೊಡುವುದಾಗಿ ಭರವಸೆ ನೀಡಿದರು. ಹಿರಿಯ ಸಾಹಿತಿಗಳಾದ ಹಾಗೂ ಸಂಸ್ಥೆಯ ವಿದ್ಯಾರ್ಥಿಯೂ ಆಗಿದ್ದ ಕೆ. ಭಾರದ್ವಾಜ್ ಆನಂದತೀರ್ಥ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆಶಯವನ್ನು ವಿವರಿಸಿದರು.
ನಂತರ ಉಪನ್ಯಾಸಕರು ಹಾಗೂ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ವೇದಿಕೆಯಲ್ಲಿದ್ದ ಗಣ್ಯರೆಲ್ಲರೂ ಸೇರಿ ನೆರವೇರಿಸಿಕೊಟ್ಟರು. ತದನಂತರ ಶಾಲೆಯ ವಿದ್ಯಾರ್ಥಿ ಆಗಿದ್ದ ಮಾಜಿ ಸೈನಿಕ ಹೆಚ್.ಎನ್. ಪುಟ್ಟೇಗೌಡರು ಮಾತನಾಡಿ, ಸೈನ್ಯಕ್ಕೆ ಸೇರುವ ಆಸಕ್ತಿ ಇರುವಂತಹ ವಿದ್ಯಾರ್ಥಿಗಳಿಗೆ ಅಗ್ನಿಪಥ್ ಯೋಜನೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳಿಗೆ ಶರಣ ಸಾಹಿತ್ಯ ಪರಿಷತ್ತಿನ ಸ್ಥಾಪನೆಯ ಉದ್ದೇಶ ಹಾಗೂ ಕದಲಿ ವೇದಿಕೆಯ ಮಹತ್ವವನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹದೇವಪ್ಪ ತಿಳಿಸಿಕೊಟ್ಟರು.
ಸಂಯುಕ್ತ ಪದವಿಪೂರ್ವ ಕಾಲೇಜು ಹೆಬ್ಬಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಹೆಚ್.ಎಲ್. ರಮೇಶ್, ಕನ್ನಡ ಸಾಹಿತ್ಯ ಪರಿಷತ್ತು ಹೆಬ್ಬಾಲೆ ಘಟಕದ ಅಧ್ಯಕ್ಷ ಎಂ. ಮೂರ್ತಿ ಮಾತನಾಡಿದರು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದAತಹ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಶಿವಪ್ಪ ಅವರು ಹಿರಿಯ ವಿದ್ಯಾರ್ಥಿಗಳಾದ ನಾವೆಲ್ಲರೂ ಈ ಸಂಸ್ಥೆಯಿAದ ಎಲ್ಲವನ್ನು ಪಡೆದಿದ್ದೇವೆ. ಹಾಗಾಗಿ ಈ ಸಂಸ್ಥೆಯ ಉಳಿವಿಗಾಗಿ ನಮ್ಮ ಕೈಲಾದ ಸಹಾಯವನ್ನು ಮಾಡುವಂತೆ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನೀಲಕಂಠರಾಯ ಭಾರದ್ವಾಜ ಹಾಗೂ ಆರ್.ಆರ್. ಕುಮಾರ್ ಅವರನ್ನು ಸನ್ಮಾನಿಸಲಾಯಿತು.