ಮಡಿಕೇರಿ, ಸೆ. ೧೭: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ೮ ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿಬಿಟಿ(ನೇರ ನಗದು ವರ್ಗಾವಣೆ) ಮೂಲಕ ಪಾವತಿಸುವ ಸಂಬAಧ ೨೦೨೨-೨೩ನೇ ಸಾಲಿಗೆ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ.
ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಪ್ರೋತ್ಸಾಹ ಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ, ಸಾಧನೆ, ಪ್ರತಿಭೆ ಮತ್ತು ಮರಣ ಪರಿಹಾರ ನಿಧಿ ಯೋಜನೆ ಈ ೮ ಯೋಜನೆಯಡಿ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ ೧೫ ಕೊನೆಯ ದಿನವಾಗಿದೆ. ಅರ್ಹರು hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಯ ಪ್ರತಿ ಸ್ವೀಕೃತಿ ಪತ್ರದೊಂದಿಗೆ ಕಚೇರಿಗೆ ಅಥವಾ ತಾಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಸಲ್ಲಿಸುವಂತೆ ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು ತಾಲೂಕು ಪಂಚಾಯಿತಿ, ಮಡಿಕೇರಿ ೮೦೭೩೧೯೨೯೧೪, ಸೋಮವಾರಪೇಟೆ ೯೦೦೮೬೮೫೧೨೯, ವೀರಾಜಪೇಟೆ ೯೯೦೦೮೮೩೬೫೪ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂ. ೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ವಿಮಲಾ ತಿಳಿಸಿದ್ದಾರೆ.