ನಾಪೋಕ್ಲು, ಸೆ. ೧೬: ಆನೆ-ಮಾನವ ಸಂಘರ್ಷದಿAದಾಗಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದು ಮುಂದಿನ ದಿನಗಳಲ್ಲಿ ಸರ್ಕಾರದ ಜೊತೆ ವ್ಯವಹರಿಸಿ ಶಾಶ್ವತ ಪರಿಹಾರವನ್ನು ಒದಗಿಸಿಕೊಡುವುದಾಗಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಹೇಳಿದರು. ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇರೂರು ಗ್ರಾಮದಲ್ಲಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಆನೆ ತುಳಿತದಿಂದ ಆಗಿರುವ ಕಾಫಿ ಗಿಡ ಹಾಗೂ ಬೆಳೆನಷ್ಟ ಪರಿಹಾರವನ್ನು ಅರಣ್ಯ ಇಲಾಖೆಯಿಂದ ನೀಡುವ ಸಂದರ್ಭದಲ್ಲಿ ಈಗಿರುವ ಮೊಬಲಗನ್ನು ಹೆಚ್ಚಿಸುವಂತೆಯೂ ಸಭೆಯಲ್ಲಿ ಬೆಳೆಗಾರರು ಒತ್ತಾಯಿಸಿದರು. ಮಡಿಕೇರಿ ವಿಭಾಗದ ಚೆಸ್ಕಾಂನ ಸಹಾಯಕ ಕಾರ್ಯಪಾಲಕ ಅಭಿಯಂತರ ವಿನಯ್ ಮಾತನಾಡಿ, ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ವಿದ್ಯುತ್ ವ್ಯತ್ಯಯ ಹಾಗೂ ಇತರ ಸಮಸ್ಯೆಗಳನ್ನು ಎದುರಿಸುತ್ತಿದ್ದು ಆಗಿರುವ ವ್ಯತ್ಯಾಸಗಳನ್ನು ಕೂಡಲೇ ಸರಿಪಡಿಸುವುದಾಗಿ ಭರವಸೆ ನೀಡಿದರು.
ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ಹಾಗೂ ಇತರೆ ವನ್ಯ ಪ್ರಾಣಿಗಳಿಂದ ಉಂಟಾಗುತ್ತಿರುವ ಬೆಳೆನಷ್ಟ, ಪ್ರಾಣಹಾನಿ ಮತ್ತು ಹೆಚ್ಚಿನ ತೊಂದರೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ತಮಗೆ ಆಗಿರುವ ತೊಂದರೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು. ಪಂಚಾಯಿತಿ ಅಧ್ಯಕ್ಷ ಮಣವಟ್ಟೀರ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಗ್ರಾಮ ಸಭೆ ನಡೆಯಿತು.
ಸಭೆಯಲ್ಲಿ ಅರಣ್ಯ, ಕಂದಾಯ, ಚೆಸ್ಕಾಂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಗ್ರಾಮ ಪಂಚಾಯಿತಿಯ ಉಪಾಧ್ಯಕೆÀ್ಷ ದೀನಾ ಮಾಯಮ್ಮ, ಪಂಚಾಯಿತಿಯ ಸದಸ್ಯರಾದ ಮಚ್ಚುರ ರವೀಂದ್ರ ಮತ್ತು ರಾಜೀವಿ, ಚೋಕಿರ ಭೀಮಯ್ಯ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಜಿ. ಪೂಣಚ್ಚ, ಸಿಬ್ಬಂದಿ ಉಪಸ್ಥಿತರಿದ್ದರು. ಈ ಸಂದರ್ಭ ಗ್ರಾಮಸ್ಥರು ತಮ್ಮ ಬೇಕು ಬೇಡಿಕೆಗಳ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟು ಸಮಸ್ಯೆಯನ್ನು ಪರಿಹರಿಸುವಂತೆ ಒತ್ತಾಯಿಸಿದರು.