ಸೋಮವಾರಪೇಟೆ, ಸೆ. ೧೭: ಸಮೀಪದ ಚೌಡ್ಲು ಗ್ರಾಮದ ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಹೆಚ್.ಜಿ. ಕುಟ್ಟಪ್ಪ ಎಂಬವರು ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಚೌಡ್ಲು ಗ್ರಾಮದ ಮಂಜುನಾಥ ಆಟೋ ವರ್ಕ್ಸ್ನಿಂದ ಕಳೆದ ಐದು ವರ್ಷಗಳಿಂದ ತಮಗೂ ತಮ್ಮ ಪತ್ನಿಗೂ ತೀವ್ರ ಮಾನಸಿಕ ಹಿಂಸೆಯಾಗಿದ್ದು ಎಲ್ಲಿಯೂ ನ್ಯಾಯ ದೊರಕಿಲ್ಲ ಎಂದು ಕುಟ್ಟಪ್ಪ ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಮೂಲಕ ತಮಗೆ ದಯಾಮರಣ ನೀಡುವಂತೆ ಕುಟ್ಟಪ್ಪ ದಂಪತಿ ಮನವಿ ಮಾಡಿದ್ದಾರೆ.