ಹೆಬ್ಬಾಲೆ, ಸೆ. ೧೭: ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ವಾಲಿಬಾಲ್ ಪಂದ್ಯಾವಳಿ ಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ಆಲೂರು ಸಿದ್ಧಾಪುರ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಹಟ್ಟಿಹೊಳೆಯ ನಿರ್ಮಲ ವಿದ್ಯಾಮಂದಿರ ಪ್ರೌಢಶಾಲೆಯನ್ನು ಸೋಲಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ, ದೈಹಿಕ ಶಿಕ್ಷಣ ಶಿಕ್ಷಕ ಬೊಜೇಗೌಡ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದರು.