ಕುಶಾಲನಗರ, ಸೆ. ೧೭: ವಿಭಿನ್ನ ಉತ್ಸವವಾಗಿರುವ ಓಣಂ ಹಬ್ಬದ ಅಂಗವಾಗಿ ಕುಶಾಲನಗರದಲ್ಲಿ ತಾ. ೧೮ ರಂದು ಅದ್ಧೂರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಕೇರಳ ಸಮಾಜ ಅಧ್ಯಕ್ಷ ಕೆ.ಆರ್. ಶಿವಾನಂದನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಕಾರ್ಯಕ್ರಮದ ವಿವರ ಒದಗಿಸಿದ ಸಮಾಜದ ಖಜಾಂಚಿ ಬಿ.ಸಿ. ಆನಂದ್ ಹಬ್ಬದ ಅಂಗವಾಗಿ ಎಪಿಸಿಎಂಎಸ್ ಕಟ್ಟಡದಲ್ಲಿ ಬೆಳಿಗ್ಗೆ ೬ ರಿಂದ ಹೂವಿನ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ.

ಕೇರಳ ಸಮಾಜ ಸಭಾಂಗಣದಲ್ಲಿ ಬೆಳಿಗ್ಗೆ ೮ ಗಂಟೆಗೆ ಡ್ರಾಯಿಂಗ್ ಸ್ಪರ್ಧೆ ಏರ್ಪಡಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ. ೮೫ ರಷ್ಟು ಮೇಲ್ಪಟ್ಟು ಅಂಕಗಳನ್ನು ಪಡೆದ ಸದಸ್ಯರ ಮಕ್ಕಳನ್ನು ಖಜಾಂಚಿ ಬಿ.ಸಿ. ಆನಂದ್ ಹಬ್ಬದ ಅಂಗವಾಗಿ ಎಪಿಸಿಎಂಎಸ್ ಕಟ್ಟಡದಲ್ಲಿ ಬೆಳಿಗ್ಗೆ ೬ ರಿಂದ ಹೂವಿನ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ.

ಕೇರಳ ಸಮಾಜ ಸಭಾಂಗಣದಲ್ಲಿ ಬೆಳಿಗ್ಗೆ ೮ ಗಂಟೆಗೆ ಡ್ರಾಯಿಂಗ್ ಸ್ಪರ್ಧೆ ಏರ್ಪಡಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ. ೮೫ ರಷ್ಟು ಮೇಲ್ಪಟ್ಟು ಅಂಕಗಳನ್ನು ಪಡೆದ ಸದಸ್ಯರ ಮಕ್ಕಳನ್ನು ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಸುಜಾ ಕುಶಾಲಪ್ಪ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮತ್ತಿತರ ಜನಪ್ರತಿನಿಧಿಗಳು ಗಣ್ಯರು ಉಪಸ್ಥಿತರಿರುವರು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸೇರಿದಂತೆ ಸಾಧಕರು ಮತ್ತು ಗಣ್ಯರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಮಾಜದ ಪ್ರಮುಖರಾದ ಪಿ. ರವೀಂದ್ರನ್, ವಿ. ಕೃಷ್ಣ, ಕೆ.ಬಿ. ಬಾಲಕೃಷ್ಣನ್, ಪಿ.ಕೆ. ಧನರಾಜ್ ಇದ್ದರು.