*ಗೋಣಿಕೊಪ್ಪ, ಸೆ. ೧೭: ಪೊನ್ನಂಪೇಟೆ ತಾಲೂಕು ಕಿಗ್ಗಟ್ಟ್ನಾಡ್ ಹಿರಿಯ ನಾಗರಿಕ ವೇದಿಕೆಯ ಪ್ರಥಮ ವಾರ್ಷಿಕ ಮಹಾಸಭೆಯು ತಾ. ೨೬ ರಂದು ನಡೆಯಲಿದೆ.
ಅಂದು ೧೦.೩೦ಕ್ಕೆ ವೇದಿಕೆಯ ಅಧ್ಯಕ್ಷ ಕೊಟ್ಟುಕತ್ತಿರ ಪಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಪೊನ್ನಂಪೇಟೆ ಇಗ್ಗುತ್ತಪ್ಪ ಸೌಹಾರ್ಧ ಬ್ಯಾಂಕ್ ಸಭಾಂಗಣದಲ್ಲಿ ಮಹಾಸಭೆ ನಡೆಯಲಿದೆ ಎಂದು ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಚೇಂದಿರ ಬೋಪಣ್ಣ ತಿಳಿಸಿದ್ದಾರೆ.