ಪೊನ್ನಂಪೇಟೆ, ಸೆ. ೧೮: ವೀರಾಜಪೇಟೆ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪೊನ್ನಂಪೇಟೆಯ ಸಂತ ಅಂತೋಣಿ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಪೊನ್ನಂಪೇಟೆಯ ಸಂತ ಅಂತೋಣಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಪೊನ್ನಂಪೇಟೆಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಸಾಧನೆಗೈದ ಈ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಚಂದ್ರಿಕಾ ಅವರು ತಿಳಿಸಿದ್ದಾರೆ.

ಅಲ್ಲದೆ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಕೆ.ಎಫ್. ಅಭಿನ್ ಇದೇ ಕ್ರೀಡಾಕೂಟದ ತಾಲೂಕು ಮಟ್ಟದ ಕ್ರಾಸ್ ಕಂಟ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ ಎಂದು ತಿಳಿಸಿದ್ದಾರೆ.