ಕರಿಕೆ, ಸೆ. ೧೮: ಕರಿಕೆ ಗ್ರಾಮ ಪಂಚಾಯಿತಿಯ ೨೦೨೧-೨೨ರ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ಹಾಗೂ ವಸತಿ ಯೋಜನೆಯ ಫಲಾನುಭವಿಗಳಿಗೆ ಕಾರ್ಯಾದೇಶ ಪ್ರತಿಯ ವಿತರಣಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಈ ಸಭೆಯಲ್ಲಿ ನೋಡಲ್ ಅಧಿಕಾರಿಗಳಾಗಿ ಮಡಿಕೇರಿ ತಾಲೂಕು ಪಂಚಾಯಿತಿ ಲೆಕ್ಕ ಸಹಾಯಕಿ ಸುನಿತಾ ಅವರು ಭಾಗವಹಿಸಿದ್ದರು.

ಸಭೆಯಲ್ಲಿ ೨೦೨೦-೨೧, ೨೦೨೧-೨೨ನೇ ಸಾಲಿನಲ್ಲಿ ಕೈಗೊಂಡ ಉದ್ಯೋಗ ಖಾತ್ರಿ ಯೋಜನೆ, ೧೪,೧೫ ನೆಯ ಹಣಕಾಸು ಯೋಜನೆಯ ಕಾಮಗಾರಿಗಳನ್ನು ಓದಿ ವರದಿ ಮಂಡನೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ರಾಜ್ಯ ಸರಕಾರದ ವಸತಿ ಯೋಜನೆಯಡಿಯಲ್ಲಿ ಆಯ್ಕೆಯಾದ ೨೬ ಫಲಾನುಭವಿಗಳಿಗೆ ಕಾರ್ಯಾದೇಶ ಪ್ರತಿಯನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕೆÀ್ಷ ಕುದುಪಜೆ ಕಲ್ಪನಾ ಜಗದೀಶ್, ಉಪಾಧ್ಯಕ್ಷ ಬಾಲಚಂದ್ರ ನಾಯರ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ನಾರಾಯಣ, ದೀಪಿಕಾ ಸೇರಿದಂತೆ ಇತರೆ ಸದಸ್ಯರು, ಅಭಿವೃದ್ಧಿ ಅಧಿಕಾರಿ ಗಣಪತಿ, ಫಲಾನುಭವಿಗಳು, ಗ್ರಾಮಸ್ಥರು, ಸಿಬ್ಬಂದಿಗಳು ಹಾಜರಿದ್ದರು.