ಗೋಣಿಕೊಪ್ಪ ವರದಿ, ಸೆ. ೧೮: ಮಾಯಮುಡಿ ಮಾನಿಲ್ ಅಯ್ಯಪ್ಪ ಸೇವಾ ಸಮಿತಿ ಮೈದಾನದಲ್ಲಿ ಕೊಡವ, ಅಮ್ಮಕೊಡವ ಕೌಟುಂಬಿಕ ವಾಲಿಬಾಲ್ ಕ್ರೀಡಾಕೂಟವನ್ನು ಅಕ್ಟೋಬರ್ ೧ ಮತ್ತು ೨ ರಂದು ಆಯೋಜಿಸಲಾಗುತ್ತಿದೆ ಎಂದು ಮಾನಿಲ್ ಅಯ್ಯಪ್ಪ ಸೇವಾ ಸಮಿತಿ ಅಧ್ಯಕ್ಷ ಸಣ್ಣುವಂಡ ವಿನು ವಿಶ್ವನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ ೨ ರಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಲಿದೆ. ಮಳೆ ಹಿನ್ನೆಲೆ ಮುಂದೂಡಲಾಗಿದ್ದ ಪಂದ್ಯಗಳು ಪೂರ್ವ ನಿಗದಿಯಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ.