ಮಡಿಕೇರಿ, ಸೆ. ೧೮: ಮಡಿಕೇರಿ ನಗರಸಭೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರಿಗೆ/ ವ್ಯಾಪಾರಸ್ಥರಿಗೆ ಬಹಳಷ್ಟು ಉದ್ದಿಮೆದಾರರು ಪರವಾನಿಗೆ ಪಡೆಯದೆ ಅಥವಾ ಪರವಾನಿಗೆ ನವೀಕರಿಸದೆ ವ್ಯಾಪಾರ ನಡೆಸುತ್ತಿರುವುದು ನಗರಸಭೆ ಗಮನಕ್ಕೆ ಬಂದಿರುತ್ತದೆ. ಈ ಹಿಂದೆ ಸಾಕಷ್ಟು ಬಾರಿ ಈ ಕುರಿತು ಸೂಚನೆಗಳನ್ನು ನೀಡಿದ್ದರು

(ಮೊದಲ ಪುಟದಿಂದ) ಈ ತನಕ ಪರವಾನಿಗೆ ಪಡೆಯದೆ ಉದ್ದಿಮೆ ನಡೆಸುತ್ತಿರುವುದು ಕಾನೂನು ಬಾಹಿರವಾಗಿದೆ.

ಎಲ್ಲಾ ಉದ್ದಿಮೆದಾರರಿಗೆ ಮುಂದಿನ ೭ ದಿನಗಳ ಒಳಗೆ ಸೂಕ್ತ ದಾಖಲೆಗಳು ಮತ್ತು ನಿಗದಿತ ಶುಲ್ಕ ಪಾವತಿಸಿರುವ ರಶೀದಿ ಸಹಿತ ಹೊಸ ಪರವಾನಿಗೆ ಹಾಗೂ ನವೀಕರಣ ಮಾಡಿಸಿಕೊಳ್ಳಬೇಕು. ತಪ್ಪಿದಲ್ಲಿ ಕರ್ನಾಟಕ ಮುನಿಸಿಪಾಲಿಟಿ ಆಕ್ಟ್ ೧೯೬೪ರ ಪ್ರಕಾರ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತ ವಿಜಯ ತಿಳಿಸಿದ್ದಾರೆ.