ಶ್ರೀಮಂಗಲ, ಸೆ. ೧೮: ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆಯುವ ಮದುವೆ ಸಮಾರಂಭದಲ್ಲಿ ಮುಹೂರ್ತದ ದಿನ ಮಧ್ಯಾಹ್ನದ ವೇಳೆ ಮದÀ್ಯ ಬಳಕೆಯನ್ನು ನಿಷೇಧಿಸಿ ನಿರ್ಣಯ ಕೈಗೊಳ್ಳಲಾಗಿದೆ.

ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಸಮಾಜದ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಜನಾಂಗದ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆಯೆಂದು ಸಮಾಜದ ಅಧ್ಯಕ್ಷರು ತಿಳಿಸಿದರು.

ಇದಲ್ಲದೇ ಜನಾಂಗದ ಹಿತದೃಷ್ಟಿಯಿಂದ ಮತ್ತು ಸಮಾಜದ ಅಭಿವೃದ್ಧಿಗೆ ಪೂರಕವಾದ ಆಂತರಿಕ ವಿಚಾರಗಳ ಹಲವು ನಿರ್ಣಯವನ್ನು ಮಹಾಸಭೆಯಲ್ಲಿ ಕೈಗೊಳ್ಳಲಾಗಿದೆ.

ಈ ಸಂದರ್ಭ ಉಪಾಧ್ಯಕ್ಷೆ ಚಿರಿಯಪಂಡ ಇಮ್ಮಿ ಉತ್ತಪ್ಪ, ಗೌ. ಕಾರ್ಯದರ್ಶಿ ಕೋಟೆರ ಕಿಶನ್ ಉತ್ತಪ್ಪ, ಖಜಾಂಚಿ ಕಳ್ಳಿಚಂಡ ಕಟ್ಟಿ ಪೂಣಚ್ಚ, ಸಹಕಾರ್ಯದರ್ಶಿ ಆಲೇಮಾಡ ಸುಧೀರ್, ಆಡಳಿತ ಮಂಡಳಿ ನಿರ್ದೇಶಕರಾದ ಮೂಕಳೇರ ಕಾವ್ಯ ಕಾವೇರಮ್ಮ, ಕೊಣಿಯಂಡ ಸಂಜು ಸೋಮಯ್ಯ, ಅಡ್ಡಂಡ ಸುನಿಲ್ ಸೋಮಯ್ಯ, ಮೂಕಳಮಾಡ ಅರಸು ನಂಜಪ್ಪ, ಚೊಟ್ಟೆಕಾಳಪಂಡ ಆಶಾ ಪ್ರಕಾಶ್, ಚೆಪ್ಪುಡೀರ ರಾಕೇಶ್ ದೇವಯ್ಯ, ಚೀರಂಡ ಕಂದಾ ಸುಬ್ಬಯ್ಯ ಹಾಗೂ ಖಾಯಂ

(ಮೊದಲ ಪುಟದಿಂದ) ಆಹ್ವಾನಿತರಾದ ಚೆಪ್ಪುಡೀರ ಕಿಟ್ಟು ಅಯ್ಯಪ್ಪ, ಕೊಡವ ಸಮಾಜ ನ್ಯಾಯಪೀಠ ಅಧ್ಯಕ್ಷ ಚಿರಿಯಪಂಡ ಉಮೇಶ್ ಉತ್ತಪ್ಪ, ಅಪ್ಪಚ್ಚಕವಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಮಂಡಚAಡ ದಿನೇಶ್ ಚಿಟ್ಟಿಯಪ್ಪ ವೇದಿಕೆಯಲ್ಲಿ ಹಾಜರಿದ್ದರು.