ಸೋಮವಾರಪೇಟೆ, ಸೆ.೧೯: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ, ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಕಾಗಡಿಕಟ್ಟೆ, ಗೆಜ್ಜೆಹಣಕೋಡು ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಸ್ತಿçÃಶಕ್ತಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮುದಾಯ ಆರೋಗ್ಯ ಸೇವೆಗಳ ಮಾಹಿತಿ ಕಾರ್ಯಾಗಾರ ನಡೆಯಿತು. ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ಮಧುಮೇಹ ಹಾಗು ರಕ್ತದೊತ್ತಡವನ್ನು ಚಿಕಿತ್ಸೆಯ ಮೂಲಕ ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ನಿಯಮಿತ ಪೌಷ್ಟಿಕ ಆಹಾರವನ್ನು ಸೇವಿಸಿಬೇಕು. ಮನೆಯ ಸುತ್ತಮುತ್ತ ಸ್ವಚ್ಚತೆಯನ್ನು ಕಾಪಾಡಿಕೊಂಡು ಸಾಂಕ್ರಾಮಿಕ ರೋಗಕ್ಕೆ ತುತ್ತಾಗದಂತೆ ಎಚ್ಚರ ವಹಿಸಿಕೊಳ್ಳಬೇಕು. ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಸೂಕ್ತ ಚಿಕಿತ್ಸೆ ದೊರೆಯಲಿದ್ದು, ಪ್ರತಿಯೊಬ್ಬರು ಅದರ ಸದುಪಯೋಗಪಡಿಸಿ ಕೊಳ್ಳಬೇಕು ಎಂದರು. ದೊಡ್ಡಮಳ್ತೆ ಗ್ರಾಪಂ. ಸದಸ್ಯ ಗೋಪಾಲಕೃಷ್ಣ, ಪಿಡಿಒ ಹರೀಶ್, ಸಮುದಾಯ ಆರೋಗ್ಯ ಅಧಿಕಾರಿ ನವ್ಯಶ್ರೀ, ಧರಣೇಶ್ ಇದ್ದರು.