ಕೂಡಿಗೆ, ಸೆ. ೧೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕೂಡಿಗೆ ಸರಕಾರಿ ಕ್ರೀಡಾ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ತಾ.೨೦ (ಇಂದು) ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭಂವರ್ ಸಿಂಗ್ ಮೀನಾ ಭಾಗವಹಿಸಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ತಿಳಿಸಿದ್ದಾರೆ.