ಸೋಮವಾರಪೇಟೆ,ಸೆ.೧೯: ಅಜಾಗರೂಕತೆಯ ಚಾಲನೆಯಿಂದಾಗಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ಎಸ್ಬಿಐ ಬಳಿಯ ನಿವಾಸಿ ವೀರೇಂದ್ರ ಎಂಬಾತ ಚಾಲಿಸುತ್ತಿದ್ದ ಡ್ಯೂಕ್ ಬೈಕ್ ಅಜಾಗರೂಕತೆಯ ಚಾಲನೆಯಿಂದಾಗಿ ಮಡಿಕೇರಿ ರಸ್ತೆಯ ಬದಿಯಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಚಾಲಕ ಸೇರಿದಂತೆ ಹಿಂಬದಿ ಕುಳಿತಿದ್ದ ಕುಶಾಲನಗರದ ಪವನ್ ಅವರುಗಳು ಕೆಳಕ್ಕೆ ಬಿದ್ದಿದ್ದಾರೆ.
ಘಟನೆಯಿಂದ ಈರ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಬೈಕ್ ಮೇಲೆ ಬಿದ್ದಿದೆ. ಸ್ಥಳಕ್ಕೆ ಪೊಲೀಸ್ ಹಾಗೂ ಸೆಸ್ಕ್ ಇಲಾಖಾ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.