ಕುಶಾಲನಗರ, ಸೆ. ೨೦: ಕುಶಾಲನಗರ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಇಂಡಿಯಾ ಸ್ವಚ್ಛತಾ ಲೀಗ್ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಪಟ್ಟಣದ ಹಲವು ಸಂಘ ಸಂಸ್ಥೆಗಳ ಪ್ರಮುಖರು, ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿ ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಚ್ಛತಾ ಅಭಿಯಾನದ ಅಂಗವಾಗಿ ನೋಂದಾವಣೆ ಮಾಡಿಕೊಂಡರು. ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಜಯವರ್ಧನ್, ಪಟ್ಟಣದ ಪಾರಂಪರಿಕ ಕಟ್ಟಡಗಳು, ನದಿ, ಸೇತುವೆ ಮುಂತಾದ ಪ್ರದೇಶಗಳಲ್ಲಿ ಸ್ವಚ್ಛತೆ ಹಮ್ಮಿಕೊಳ್ಳುವ ಮೂಲಕ ಪಟ್ಟಣವನ್ನು ಸ್ವಚ್ಛ ನಗರವನ್ನಾಗಿಸು ವುದು ಈ ಅಭಿಯಾನದ ಉದ್ದೇಶ ವಾಗಿದೆ ಎಂದರು.
ಕುಶಾಲನಗರದ ಮಾಜಿ ಸೈನಿಕರು ಸೇರಿದಂತೆ ಹಲವು ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು, ಜನಪ್ರತಿನಿಧಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭ ಸದಸ್ಯರು ಕಾವೇರಿ ನದಿ ತಟ, ಕುಶಾಲನಗರ ಬಸ್ ನಿಲ್ದಾಣ ಆವರಣ, ಕಾವೇರಿ ನದಿ ಸೇತುವೆ ಮುಂತಾದೆಡೆ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.
ಕುಶಾಲನಗರ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಸುರಯ್ಯಬಾನು, ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್, ಆರೋಗ್ಯ ಅಧಿಕಾರಿ ಉದಯಕುಮಾರ್, ಪಟ್ಟಣ ಪಂಚಾಯಿತಿ ಸರ್ವ ಸದಸ್ಯರು, ಪೌರಕಾರ್ಮಿಕರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸದಸ್ಯರು ಸಾರ್ವಜನಿಕರು ಸೇರಿದಂತೆ ೫೦೦ಕ್ಕೂ ಅಧಿಕ ಮಂದಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.