ಮಡಿಕೇರಿ, ಸೆ. ೨೦: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ ಅವರು ತಾ. ೨೧ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಡಿ ಪ್ರಾಧಿಕಾರದ ಅನುದಾನದಿಂದ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಮತ್ತು ಹಣ ಬಳಕೆ ಪ್ರಮಾಣ ಪತ್ರಗಳ ಪರಿಶೀಲನೆ ಹಾಗೂ ಗಡಿ ಭಾಗದಲ್ಲಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ತಿಳಿಸಿದ್ದಾರೆ.