ಐಸಿಸ್ ಉಗ್ರ ಸಂಘಟನೆ ಜೊತೆ ನಂಟು: ಶಂಕಿತ ಉಗ್ರರ ಬಂಧನ

ಶಿವಮೊಗ್ಗ, ಸೆ. ೨೦: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊAದಿಗೆ ನಂಟು ಹೊಂದಿರುವ ಆರೋಪದಡಿ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡವು ಇಬ್ಬರನ್ನು ಬಂಧಿಸಿದ್ದು ಮತ್ತೊಬ್ಬನಿಗಾಗಿ ಶೋಧ ನಡೆಸಿದೆ. ಶಂಕಿತ ಉಗ್ರರು ಸ್ಫೋಟಕಗಳನ್ನು ಹೊಂದಿದ್ದು ರಾಜ್ಯಾದ್ಯಂತ ವಿಧ್ವಂಸಕ ಕೃತ್ಯ ನಡೆಸಲು ಯೋಜಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶಿವಮೊಗ್ಗದ ಸಿದ್ದೇಶ್ವರ ನಗರದ ಸೈಯದ್ ಯಾಸೀನ್, ತೀರ್ಥಹಳ್ಳಿಯ ಸೊಪ್ಪುಗಡ್ಡೆ ನಿವಾಸಿ ಶಾರೀಕ್ ಹಾಗೂ ಮಂಗಳೂರಿನ ಮಾಜ್ ಮುನೀರ್ ವಿರುದ್ಧ ಪೊಲೀಸರು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಸ್ವಂತವಾಗಿ ಪ್ರಕರಣ ದಾಖಲಿಸಿದ್ದಾರೆ. ಕಿಂಗ್‌ಪಿನ್ ಯಾಸಿನ್‌ನನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ಯಾಸಿನ್ ಎಲೆಕ್ಟಿçಕಲ್ ಇಂಜಿನಿಯರ್ ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿಗಳು ಪಿಎಫ್‌ಐ ಹೇಳಿದಂತೆ ವರ್ತಿಸುತ್ತಿದ್ದಾರೆ: ಸುಪ್ರೀಂಗೆ ರಾಜ್ಯ ಸರ್ಕಾರ

ನವದೆಹಲಿ, ಸೆ. ೨೦: ೨೦೨೧ರ ತನಕ ಯಾವುದೇ ಹೆಣ್ಣು ಮಕ್ಕಳು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿರಲಿಲ್ಲ ಎಂದು ಪ್ರತಿಪಾದಿಸಿರುವ ಕರ್ನಾಟಕ ಸರ್ಕಾರ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಆರಂಭಿಸಿದ ಸಾಮಾಜಿಕ ಮಾಧ್ಯಮ ಆಂದೋಲನದಿAದ ಈ ವಿವಾದ ಸೃಷ್ಟಿಯಾಗಿದೆ ಎಂದು ಸುಪ್ರೀಂ ಕೋರ್ಟ್ನಲ್ಲಿ ಹಿಜಾಬ್ ನಿಷೇಧವನ್ನು ಸಮರ್ಥಿಸಿಕೊಂಡಿದೆ. ಇಂದು ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು, ಧಾರ್ಮಿಕ ಆಂದೋಲನ ಸೃಷ್ಟಿಸಲು ಈ ವಿವಾದ ಹುಟ್ಟು ಹಾಕಲಾಗಿದೆ. ಇದು ವಿದ್ಯಾರ್ಥಿಗಳ ಸ್ವಯಂಪ್ರೇರಿತ ಕೃತ್ಯವಲ್ಲ ಎಂದು ಹೇಳಿದರು. ಹಿಜಾಬ್ ಪ್ರತಿಭಟನೆ ದೊಡ್ಡ ಪಿತೂರಿಯ ಭಾಗವಾಗಿದೆ ಮತ್ತು ವಿದ್ಯಾರ್ಥಿಗಳು ಪಿಎಫ್‌ಐ ಸಲಹೆಯಂತೆ ವರ್ತಿಸುತ್ತಿದ್ದಾರೆ. ಈ ಪ್ರತಿಭಟನೆಯ ಹಿಂದೆ ಪಿಎಫ್‌ಐ ಪಾತ್ರ ಇದೆ ಎಂದು ತುಷಾರ್ ಮೆಹ್ತಾ ಕೋರ್ಟ್ಗೆ ತಿಳಿಸಿದರು.

ಅಥ್ಲೀಟ್ ಪೂವಮ್ಮಗೆ ೨ ವರ್ಷ ನಿಷೇಧ

ನವದೆಹಲಿ, ಸೆ. ೨೦: ಭಾರತದ ಹಿರಿಯ ಅಥ್ಲೀಟ್, ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರು ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದು, ೨ ವರ್ಷ ನಿಷೇಧಕ್ಕೆ ಒಳಗಾಗಿದ್ದಾರೆ. ಈ ಹಿಂದೆ ಅವರು ೩ ತಿಂಗಳವರೆಗೆ ನಿಷೇಧಕ್ಕೆ ಒಳಗಾಗಿದ್ದರು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ೩೨ ವರ್ಷದ ಪೂವಮ್ಮ ಅವರು ಕಳೆದ ವರ್ಷ ಫೆಬ್ರವರಿಯಲ್ಲಿ ಪಟಿಯಾಲದಲ್ಲಿ ನಡೆದಿದ್ದ ಇಂಡಿಯನ್ ಗ್ರ‍್ಯಾನ್‌ಪ್ರಿ ಕೂಟದಲ್ಲಿ ಭಾಗವಹಿಸಿದ್ದರು. ಅದರಲ್ಲಿ ಅವರು ಪರೀಕ್ಷೆಗೆ ನೀಡಿದ್ದ ಮಾದರಿಯಲ್ಲಿ ನಿಷೇಧಿತ ಮೆಥೈಲ್‌ಹೆಕ್ಸಾನೀಮೈನ್ ಮದ್ದಿನ ಅಂಶ ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಈ ವರ್ಷದ ಜೂನ್‌ನಲ್ಲಿ ಅವರಿಗೆ ಎಡಿಡಿಪಿ ಮೂರು ತಿಂಗಳ ನಿಷೇಧ ಶಿಕ್ಷೆ ವಿಧಿಸಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ರಾಷ್ಟಿçÃಯ ಉದ್ದೀಪನ ಮದ್ದು ತಡೆ ಘಟಕ (ನಾಡಾ) ಮೇಲ್ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಎಡಿಎಪಿ ಶಿಕ್ಷೆಯನ್ನು ಎರಡು ವರ್ಷಕ್ಕೆ ವಿಸ್ತರಿಸಿದೆ.

ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರ : ಅಧಿಕಾರಿ ಅಮಾನತು

ಲಖನೌ, ಸೆ. ೨೦: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಿಳಾ ಆಟಗಾರರಿಗೆ ಶೌಚಾಲ ಯದಲ್ಲಿ ಶೇಖರಿಸಿಟ್ಟ ಆಹಾರವನ್ನು ಬಡಿಸಲಾಗಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಕ್ರೀಡಾ ಅಧಿಕಾರಿಯನ್ನು ಅಮಾನತು ಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕ್ರೀಡೆ) ನವನೀತ್ ಸೆಹಗಲ್ ಅವರು ಸಹರಾನ್‌ಪುರ ಜಿಲ್ಲಾ ಕ್ರೀಡಾ ಅಧಿಕಾರಿ ಅನಿಮೇಶ್ ಸಕ್ಸೇನಾ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ಪಿಟಿಐಗೆ ತಿಳಿಸಿದ್ದಾರೆ. ಸೆಪ್ಟೆಂಬರ್ ೧೬ ರಂದು ನಡೆದ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಾ. ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಬ್ ಜೂನಿಯರ್ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟಿದ್ದ ಅನ್ನ ಮತ್ತು ಪೂರಿಯನ್ನು ಬಡಿಸುತ್ತಿರುವ ದೃಶ್ಯ ಕಂಡು ಬಂದಿತು.