ಕೊಡ್ಲಿಪೇಟೆ, ಸೆ. ೨೦: ಸ್ಥಳೀಯ ಚೌಡೇಶ್ವರಿ ದೇವಾಲಯದ ಸಮುದಾಯ ಭವನದಲ್ಲಿ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಮುಖರು, ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವಕರ್ಮರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿ ಅವರ ಸಂದೇಶವನ್ನು ಸಾರಲಾಯಿತು.

ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಕೆ.ಎ. ನಾಗೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎ.ನವೀನ್ ರವರು ದಿನದ ಮಹತ್ವದ ಬಗ್ಗೆ ವಿವರಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಕೆ.ಬಿ. ಸುಬ್ರಮಣ್ಯ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಕೃಷ್ಣಚಾರ್ಯ, ಜಯರಾಮಚಾರ್ಯ, ಗ್ರಾ.ಪಂ. ಮಾಜಿ ಅಧ್ಯಕ್ಷೆ ರೋಹಿಣಿ, ಆಚರಣಾ ಸಮಿತಿ ಉಪಾಧ್ಯಕ್ಷ ಹೆಚ್.ವಿ. ರಾಮು, ಪ್ರಮುಖರಾದ ರಮೇಶ್ ಆಚಾರ್ಯ, ಹೂವಾಚಾರ್ಯ, ಗಣೇಶ್ ಆಚಾರ್ಯ, ಕೆ.ಎಸ್. ನಾಗೇಶ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು, ಹೋಬಳಿ ವ್ಯಾಪ್ತಿಯ ನೂರಕ್ಕೂ ಅದಿಕ ವಿಶ್ವಕರ್ಮ ಬಾಂಧವರು ಮತ್ತು ಅವರ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು.