ಗೋಣಿಕೊಪ್ಪಲು, ಸೆ. ೨೦: ಗೋಣಿಕೊಪ್ಪಲುವಿನ ಶ್ರೀ ಕಾವೇರಿ ದಸರಾ ಸಮಿತಿಯ ೪೪ನೇ ವರ್ಷದ ಆ್ಯಪ್ ಬಿಡುಗಡೆ ನಡೆಯಿತು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಮುಂದಾಳತ್ವದಲ್ಲಿ ಕಾವೇರಿ ದಸರಾ ಸಮಿತಿಯ ಪದಾಧಿಕಾರಿಗಳ ನಿಯೋಗ ಬೆಂಗಳೂರಿಗೆ ತೆರಳಿ, ವಿಧಾನ ಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ಗೋಣಿಕೊಪ್ಪ ದಸರಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.
ಈ ವೇಳೆ ಸಚಿವರು ಕಾವೇರಿ ದಸರಾ ಸಮಿತಿಯ ಪ್ರಸ್ತುತ ಸಾಲಿನ ಆ್ಯಪ್ ಬಿಡುಗಡೆ ಮಾಡಿದರು. ಈ ವೇಳೆ ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ಬಿ.ಎನ್. ಪ್ರಕಾಶ್, ಕಾರ್ಯಧ್ಯಕ್ಷ ಸಿ.ಕೆ. ಬೋಪಣ್ಣ, ಮಹಾಪೋಷಕ ಕಾಡ್ಯಮಾಡ ಗಿರೀಶ್ ಗಣಪತಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಪ್ರ. ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರವೀಣ್, ಬಿಜೆಪಿ ಪಕ್ಷದ ಮುಖಂಡರಾದ ಅರುಣ್ ಭೀಮಯ್ಯ, ಚಪ್ಪುಡೀರ ಮಾಚು, ಕುಪ್ಪಂಡ ಗಿರಿ, ಸೇರಿದಂತೆ ಕಾವೇರಿ ದಸರಾ ಸಮಿತಿಯ ಪ್ರ. ಕಾರ್ಯದರ್ಶಿ ಜಪ್ಪು ಸುಬ್ಬಯ್ಯ, ಖಜಾಂಜಿ ಮಲ್ಚೀರ ಗಾಂಧಿ ದೇವಯ್ಯ, ಉಪಾಧ್ಯಕ್ಷ ಕೆ. ರಾಜೇಶ್, ಶಿವಾಜಿ ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು.