ಸುಂಟಿಕೊಪ್ಪ: ಸುಂಟಿಕೊಪ್ಪ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಟ್ಟಣದಲ್ಲಿ ಮುಖ್ಯ ಬೀದಿಯ ಸಾರ್ವಜನಿಕರಿಗೆ ಪ್ರಧಾನಿ ಹುಟ್ಟುಹಬ್ಬ ಅಂಗವಾಗಿ ಸಿಹಿ ಹಂಚಲಾಯಿತು.

ಈ ಸಂದರ್ಭ ಶಕ್ತಿ ಕೇಂದ್ರದ ಪ್ರಮುಖ್‌ಗಳಾದ ಬಿ.ಕೆ. ಪ್ರಶಾಂತ್, ವಾಸುದೇವ್, ಒಬಿಸಿ ತಾಲೂಕು ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್‌ಕುಮಾರ್, ಒಬಿಸಿ ಕಾರ್ಯದರ್ಶಿ ಪಿ.ಜಿ. ಶಾಂತಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುಳಾ, ವಸಂತಿ, ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಕೇಂದ್ರದ ಸಹ ಪ್ರಮುಖ್ ಪ್ರಶಾಂತ್, ರಂಜಿತ್, ಸುಂಟಿಕೊಪ್ಪ ಒಬಿಸಿ ಅಧ್ಯಕ್ಷ ಸಿ.ಸಿ. ಸುನಿಲ್, ಆಶ್ವಥ್ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಗೂ ಪಕ್ಷದ ಕಾರ್ಯಕರ್ತರು ಮತ್ತಿತರರು ಇದ್ದರು.ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೋದಿ ಅವರ ಆರೋಗ್ಯ ವೃದ್ಧಿ ಹಾಗೂ ಮುಂದಿನ ಜೀವನ ಉಜ್ವಲವಾಗಿರಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.ನಾಪೋಕ್ಲು: ಪ್ರಧಾನಿ ನರೇಂದ್ರ ಮೋದಿ ಅವರ ೭೨ನೇ ವರ್ಷದ ಜನ್ಮದಿನದ ಪ್ರಯುಕ್ತ ಇಲ್ಲಿಯ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಹಣ್ಣು ಹಂಪಲನ್ನು ವಿತರಿಸಲಾಯಿತು.

ಈ ಸಂದರ್ಭ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ತಾಲೂಕು ಬಿಜೆಪಿ ಕಾರ್ಯದರ್ಶಿ ಅಮ್ಮಂಡ ಮನು ಮಹೇಶ್, ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಿವಚಾಳಿಯಂಡ ಜಗದೀಶ್, ಪಕ್ಷದ ಕಾರ್ಯಕರ್ತರು, ಸಮುದಾಯ ಆರೋಗ್ಯ ಕೇಂದ್ರದ ಡಾ. ಜೀವನ್ ಮತ್ತಿತರರು ಇದ್ದರು.ಕೂಡಿಗೆ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಕೂಡಿಗೆಯ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ವೃದ್ಧರಿಗೆ ದಿನೋಪಯೋಗಿ ವಸ್ತುಗಳನ್ನು ನೀಡುವುದರ ಜೊತೆಗೆ ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕೂಡಿಗೆಯಲ್ಲಿರುವ ವೃದ್ಧಾಶ್ರಮದ ನೂತನ ಕಟ್ಟಡಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಜಾಗದ ಗುರುತಿಸುವಿಕೆಯನ್ನು ಮಾಡಿದರೆ ಶಾಸಕರ ಅನುದಾನ ಮತ್ತು ಇಲಾಖಾ ಅನುದಾನವನ್ನು ಬಳಕೆ ಮಾಡಿಕೊಂಡು ವಯೋವೃದ್ಧರಿಗೆ ಅನುಕೂಲವಾಗುವಂತೆ ಸುಸಜ್ಜಿತ ಕಟ್ಟಡವನ್ನು ನಿರ್ಮಾಣ ಮಾಡುವ ಭರವಸೆಯನ್ನು ರಂಜನ್ ನೀಡಿದರು. ಈ ಸಂದರ್ಭ ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈವರ್ಧನ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಬಾಸ್ಕರ್ ನಾಯಕ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ, ಹೆಬ್ಬಾಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅರುಣಕುಮಾರಿ, ಕುಶಾಲನಗರ ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್, ಕೂಡುಮಂಗಳೂರು ಶಕ್ತಿ ಕೇಂದ್ರ ಅಧ್ಯಕ್ಷ ಮಂಜುನಾಥ, ಜಿಲ್ಲಾ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಪ್ರಭಾಕರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಾಂಚೀರ ಮನು ನಂಜುಡ, ಕೆ.ಕೆ. ಭೋಗಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಂಜುಳ, ಕುಶಾಲನಗರ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಜಿ. ಮನು ಹಾಗೂ ಇತರರು ಇದ್ದರು.ಗೋಣಿಕೊಪ್ಪ ವರದಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ, ವೀರಾಜಪೇಟೆ ಮಂಡಲ ಯುವ ಮೋರ್ಚಾ ವತಿಯಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ, ಕಸ ಹೆಕ್ಕುವುದು, ರಸ್ತೆ ಬದಿಯ ಕಾಡು ಕಡಿದು ಸ್ವಚ್ಛತೆ ಕಾರ್ಯ ನಡೆಸಲಾಯಿತು. ೧ ಸಾವಿರಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತು.

ಹಾತೂರು, ಹೊಸೂರು, ಕಿರುಗೂರು, ಕಾನೂರು, ಬಲ್ಯಮುಂಡೂರು, ಪೊನ್ನಂಪೆಟೆ, ಹುದಿಕೇರಿ, ನಾಲ್ಕೇರಿ, ಶ್ರೀಮಂಗಲ, ಕುಟ್ಟ, ರ‍್ವತೊಕ್ಲು, ಕಾಕೋಟುಪರಂಬು, ಮಾಯಮುಡಿ, ದೇವರಪುರ, ಬಿಳುಗುಂದ, ಗೋಣಿಕೊಪ್ಪ, ಸಿದ್ದಾಪುರ, ಚೆನ್ನಯ್ಯನಕೋಟೆ, ಪೊನ್ನಪ್ಪಸಂತೆ, ನಿಟ್ಟೂರು, ಬಾಳೆಲೆ, ಬಿ. ಶೆಟ್ಟಿಗೇರಿ, ಕುಟ್ಟ-ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯ ಕಾರ್ಯಕರ್ತರು ಗಿಡ ನೆಟ್ಟರು.