ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಲೇಖಕ ಭಾರದ್ವಾಜ ಕರೆ
ಕೂಡಿಗೆ, ಸೆ. ೨೩: ವಿದ್ಯಾರ್ಥಿಗಳ ಮುಂದಿನ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ನಾಯಕತ್ವ ಗುಣಗಳು ಸಹಕಾರಿಯಾಗಲಿವೆ ಎಂದು ಸಾಹಿತಿ, ಲೇಖಕ ಭಾರದ್ವಾಜ ಕೆ. ಆನಂದತೀರ್ಥ ಹೇಳಿದರು.
ಕುಶಾಲನಗರ ತಾಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಹಾಗೂ ವಿದ್ಯಾರ್ಥಿ ಸಂಘದ ಸಹಯೋಗ ದೊಂದಿಗೆ ಏರ್ಪಡಿಸಿದ್ದ ವಿದ್ಯಾರ್ಥಿ ಸಂಘದ ಚಟುವಟಿಕೆಗಳು ಹಾಗೂ ಮಕ್ಕಳ ಸಂಸತ್ತು ಕಾರ್ಯಕಲಾಪ ಗಳನ್ನು ಉದ್ಘಾಟಿಸಿ ಮಾತನಾಡಿದರು.
ನಾಯಕತ್ವ ಗುಣವು ವಿದ್ಯಾರ್ಥಿಗಳ ಜೀವನವನ್ನು ಸದೃಢ ಮಾಡುವುದರ ಜತೆಗೆ ಆರೋಗ್ಯವಂತ ಸಮಾಜ ಸೃಷ್ಟಿಯಲ್ಲಿಯೂ ಪಾತ್ರವಹಿಸುತ್ತದೆ ಎಂದರು.
ಸ್ವಭಾವತಃ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವ್ಯಕ್ತಿತ್ವದ ನಾಯಕತ್ವದ ಗುಣಗಳಿರುತ್ತವೆ. ಅದನ್ನು ಸಮರ್ಪಕವಾಗಿ ಬಳಸಿ ಕೊಂಡಾಗ ಉತ್ತಮ ನಾಯಕನಾಗಿ ರೂಪುಗೊಳ್ಳಲು ಸಾಧ್ಯ ಎಂದು ಲೇಖಕ ಭಾರದ್ವಾಜ ಹಲವು ದೃಷ್ಟಾಂತಗಳನ್ನು ವಿವರಿಸಿದರು.
ಬಹುಮಾನ ವಿತರಿಸಿ ಮಾತನಾಡಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು, ಪುಸ್ತಕಗಳನ್ನು ಓದುವ ಮೂಲಕ ಉತ್ತಮ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು. ನಿವೃತ್ತ ಮುಖ್ಯೋಪಾ ಧ್ಯಾಯ ಬಿ.ಆರ್. ಕುಮಾರ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕೆಯ ಹಿಂದೆ ಶ್ರಮ ಅಗತ್ಯ. ವಿದ್ಯಾರ್ಥಿಗಳು ಕಾಲಹರಣ ಮಾಡದೇ ಸಮಯವನ್ನು ಸದುಪಯೋಗ ಮಾಡಿಕೊಂಡು ಉತ್ತಮ ಜ್ಞಾನವನ್ನು ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ನಿವೃತ್ತ ದೈಹಿಕ ಶಿಕ್ಷಣ ಅಧಿಕಾರಿ ಎಸ್.ಟಿ. ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸಂಯಮ ವನ್ನು ಅಳವಡಿಸಿಕೊಂಡು ಶ್ರದ್ಧೆ, ಆಸಕ್ತಿ ವಹಿಸಿ ಅಭ್ಯಾಸ ಮಾಡಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿ ಕೊಳ್ಳಬೇಕು ಎಂದರು. ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಬಿ.ಎನ್. ಪುಷ್ಪ, ವಿದ್ಯಾರ್ಥಿಗಳು ವಿದ್ಯಾರ್ಥಿ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗುವ ಮೂಲಕ ಉತ್ತಮ ನಾಯಕತ್ವ ಬೆಳೆಸಿಕೊಳ್ಳಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾ ಧ್ಯಾಯ ಟಿ.ಜಿ. ಪ್ರೇಮಕುಮಾರ್, ವಿದ್ಯಾರ್ಥಿ ಸಂಘದ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕತ್ವ ಬೆಳೆಸಿಕೊಳ್ಳಲು ಸಹಕಾರಿಯಾಗಿವೆ ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಸ್.ಎನ್. ಪುಟ್ಟಸ್ವಾಮಿ ಮಾತನಾಡಿದರು.
ಸನ್ಮಾನ: ನಿವೃತ್ತ ಮುಖ್ಯೋಪಾ ಧ್ಯಾಯ ಬಿ.ಆರ್. ಕುಮಾರ್, ನಿವೃತ್ತ ದೈಹಿಕ ಶಿಕ್ಷಣ ಅಧಿಕಾರಿ ಎಸ್.ಟಿ. ವೆಂಕಟೇಶ್ ಹಾಗೂ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್ ಅವರನ್ನು ಶಿಕ್ಷಕರ ದಿನಾಚರಣೆ ಅಂಗವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರತಿನಿಧಿ ಪಿ. ನವೀನ್, ಎಸ್.ಡಿ.ಎಂ.ಸಿ. ಸದಸ್ಯ ಜವರಯ್ಯ, ಶಿಕ್ಷಕರಾದ ಜಿ. ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ. ರಮ್ಯ, ಎಸ್.ಎಂ .ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ವೈ.ಎಂ. ಸರಸ್ವತಿ, ಶಾಲಾ ನಾಯಕಿ ಸಂಜನಾ, ಮಂತ್ರಿ ಮಂಡಲದ ಪದಾಧಿಕಾರಿಗಳು ಇದ್ದರು. ನಂತರ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಪ್ರದರ್ಶನ ಗಮನ ಸೆಳೆಯಿತು. ಶಿಕ್ಷಕಿ ಬಿ.ಎಸ್. ಅನ್ಸಿಲಾ ರೇಖಾ ನಿರ್ವಹಿಸಿದರು. ಶಿಕ್ಷಕ ಕೆ. ಗೋಪಾಲಕೃಷ್ಣ ಸ್ವಾಗತಿಸಿದರು. ಶಿಕ್ಷಕ ದಯಾನಂದ ಪ್ರಕಾಶ್ ವಂದಿಸಿದರು.